ಉಡುಪಿ, ಅ 09 (DaijiworldNews/HR): ಇಸ್ರೇಲ್ ದೇಶದ ಪ್ರಸ್ತುತ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಇಸ್ರೇಲ್ ದೇಶಗಳಲ್ಲಿ ವ್ಯಾಪಾರ, ಶಿಕ್ಷಣ, ಉದ್ಯೋಗ ಹಾಗೂ ಇತರ ಉದ್ದೇಶಗಳಿಗೆ ಹೋಗಿರುವ ಮತ್ತು ವಾಸವಾಗಿರುವ ಉಡುಪಿ ಜಿಲ್ಲೆಗೆ ಸಂಬಂಧಪಟ್ಟ ಭಾರತದ ಪ್ರಜೆಗಳಿದ್ದಲ್ಲಿ ಅವರ ಬಗ್ಗೆ ಮಾಹಿತಿಯನ್ನು ಜಿಲ್ಲಾಧಿಕಾರಿಯವರ ಕಚೇರಿ ಉಡುಪಿ, ರಜತಾದ್ರಿ ಮಣಿಪಾಲದಲ್ಲಿ ತೆರೆದಿರುವ ಕಂಟ್ರೋಲ್ ರೂಂ, ಸಂಖ್ಯೆ: 1077/ 0820-2574802 ಗೆ ಕರೆ ಮಾಡಿ ಕೂಡಲೇ ಮಾಹಿತಿ ನೀಡುವಂತೆ ಕೋರಲಾಗಿದೆ.
ಜಿಲ್ಲಾಧಿಕಾರಿ
ಇನ್ನು ರಾಜ್ಯ ಸರಕಾರದ ತುರ್ತು ಸಂಖ್ಯೆ: 080-22340676, 080-22253707 ಮಾಹಿತಿ ನೀಡುವಂತೆ ಉಡುಪಿ ಜಿಲ್ಲಾಡಳಿತ ತಿಳಿಸಿದೆ.