ಉಡುಪಿ, ಅ 09 (DaijiworldNews/HR): ಹಿಂದೂ ಸಮಾಜೋತ್ಸವದ ಹಿನ್ನೆಲೆ ಉಡುಪಿ ಜಿಲ್ಲಾ ಪೊಲೀಸರು ಸೋಮವಾರದಂದು ನಗರದಲ್ಲಿ ಪಥ ಸಂಚಲನ ನಡೆಸಿದ್ದಾರೆ.
ಶಾರದಾ ಕಲ್ಯಾಣ ಮಂಟಪದಿಂದ ಆರಂಭವಾದ ಮೆರವಣಿಗೆಯು ಉಡುಪಿ ನಗರದ ಬಸ್ ನಿಲ್ದಾಣದವರೆಗೆ ನಡೆಯಿತು.
ಅ.10ರಂದು ನಗರದಲ್ಲಿ ವಿಶ್ವಹಿಂದೂ ಪರಿಷತ್, ಬಜರಂಗದಳ ಆಯೋಜಿಸಿರುವ ಹಿಂದೂ ಸಮಾಜೋತ್ಸವದ ಪೂರ್ವಭಾವಿಯಾಗಿ ಮೆರವಣಿಗೆ ನಡೆಸಲಾಯಿತು.
ಉಡುಪಿ ಜಿಲ್ಲಾ ಪೊಲೀಸ್, ಕೆಎಸ್ಆರ್ಪಿ, ಡಿಎಆರ್, ಕಾರವಾರ ಜಿಲ್ಲೆಯ ಪೊಲೀಸರನ್ನೊಳಗೊಂಡ ಸುಮಾರು 400 ಪೊಲೀಸ್ ಸಿಬ್ಬಂದಿ ಪಥ ಸಂಚಲನದಲ್ಲಿ ಪಾಲ್ಗೊಂಡಿದ್ದರು.
ಮೆರವಣಿಗೆಯಲ್ಲಿ ಎಸ್.ಟಿ.ಸಿದ್ದಲಿಂಗಪ್ಪ, ಉಡುಪಿ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ದಿನಕರ ಪಿ.ಕೆ., ಉಪ ಪೊಲೀಸ್ ವರಿಷ್ಠಾಧಿಕಾರಿ ಮಂಜುನಾಥ್ ಎಂ., ವೃತ್ತಾಧಿಕಾರಿ ಮಂಜಪ್ಪ ಡಿ.ಆರ್., ಉಡುಪಿ ನಗರ ಠಾಣೆ ಪೊಲೀಸ್ ನಿರೀಕ್ಷಕ ಮತ್ತಿತರರು ಉಪಸ್ಥಿತರಿದ್ದರು.