ಮೂಡುಬಿದಿರೆ, ಅ 09 (DaijiworldNews/HR): ಕಾಲೇಜೊಂದರಲ್ಲಿ ದಾಖಲಾತಿ ವಿಭಾಗದಲ್ಲಿ ಉದ್ಯೋಗಿಯಾಗಿರುವ ಯುವಕನೋರ್ವ ಹಾಸ್ಟೇಲಿನ ರೂಮಿನಲ್ಲಿ ಸೋಮವಾರ ಮಧ್ಯಾಹ್ನ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಮೂಲತ: ಬಾಗಲಕೋಟೆಯ ನಿವಾಸಿ ಹನುಮಂತಪ್ಪ (24) ಆತ್ಮಹತ್ಯೆ ಮಾಡಿಕೊಂಡಿರುವ ಯುವಕ.
ಯುವಕ ಜನವರಿಯಲ್ಲಿ ಉದ್ಯೋಗಕ್ಕೆ ಸೇರಿಕೊಂಡಿದ್ದು, ಮೂಡುಬಿದಿರೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಆತ್ಮಹತ್ಯೆಗೆ ಕಾರಣ ಇನ್ನಷ್ಟೇ ತಿಳಿದು ಬರಬೇಕಿದೆ. ಹನುಮಂತಪ್ಪನ ಹೆತ್ತವರು ಮೂಡುಬಿದಿರೆಗೆ ಬಂದ ನಂತರ ಮೃತದೇಹವನ್ನು ಅವರು ಒಪ್ಪಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ಯಾವುದೇ ಸಮಸ್ಯೆಗೆ ಆತ್ಮಹತ್ಯೆ ಪರಿಹಾರವಲ್ಲ. ನೀವು ಯಾವುದೇ ತೊಂದರೆಯಲ್ಲಿದ್ದರೆ ದಯವಿಟ್ಟು ಮಾನಸಿಕ ಆರೋಗ್ಯ ತಜ್ಞರ ಸಹಾಯ ಪಡೆಯಿರಿ. ಸಹಾಯವಾಣಿ ಸಂಖ್ಯೆ - 9152987821