ಬಂಟ್ವಾಳ, ಅ 10 (DaijiworldNews/AK): ರೈತರನ್ನು ಕತ್ತಲಲ್ಲಿಟ್ಟು ಬೆಲೆಬಾಳುವ ಜಮೀನಿನ ಮೇಲೆ ಸವಾರಿ ಮಾಡಲು ಹೊರಟಿರುವ ಕಂಪೆನಿ ವಿರುದ್ದ ರೈತರು ತಿರುಗಿಬಿದ್ದ ಘಟನೆ ವಿಟ್ಲದಲ್ಲಿ ನಡೆದಿದೆ.
ನಂದಿಕೂರಿನಿಂದ ಕಾಸರಗೋಡಿಗೆ ಹೋಗುವ 400ಕೆ.ವಿ ಹೈ ಟೆನ್ ಮಾರ್ಗವನ್ನು ಪುಣಚ ಗ್ರಾಮದ ಬೈರಿಕಟ್ಟೆಯಿಂದ ಕಾಮಗಾರಿ ಆರಂಭ ಮಾಡಲು ಯತ್ನಿಸಿದಾಗ ಪರಿಸರದ ರೈತಾಪಿವರ್ಗದವರು ತೀವ್ರವಾಗಿ ಪ್ರತಿಭಟಿಸಿದರು.
ಸರ್ವೇ ಮಾಡದೆ, ರೈತರಿಗೆ ಮಾಹಿತಿ ನೀಡದೆ, ಮುಖಾಮುಖಿ ಸಭೆ ನಡೆಸದೆ ಕಾಮಗಾರಿ ಆರಂಭ ಮಾಡಲು ಯತ್ನಿಸಿದಾಗ ಪರಿಸರದ ರೈತಾಪಿ ವರ್ಗದವರು ತೀವ್ರವಾಗಿ ಪ್ರತಿಭಟಿಸಿದರು.
ವಿಷಯ ತಿಳಿದು ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ಪುತ್ತೂರು ಮಾಜಿ ಶಾಸಕರಾದ ಸಂಜೀವ ಮಠಂದೂರು ಜಿಲ್ಲಾಧಿಕಾರಿಗಳನ್ನು ಸಂಪರ್ಕಿಸಿ ತಕ್ಷಣ ಕಾಮಗಾರಿಗಳನ್ನು ನಿಲ್ಲಿಸಬೇಕು ಮತ್ತು ಈ ಭಾಗದ ರೈತರ ಸಭೆ ಕರೆದು ಚರ್ಚಿಸಬೇಕು ಎಂದರು .
ಇದಕ್ಕೆ ಸ್ಪಂದಿಸಿದ ಜಿಲ್ಲಾಧಿಕಾರಿ ಕಾಮಗಾರಿಯನ್ನು ಈ ಕೂಡಲೇ ನಿಲ್ಲಿಸುವಂತೆ ಬಂಟ್ವಾಳ ತಹಸೀಲ್ದಾರವರಿಗೆ ತಿಳಿಸಿದರು.