ಕಾಸರಗೋಡು, ಅ 11 (DaijiworldNews/MS): ಮಂಜೇಶ್ವರ ಚುನಾವಣಾ ಲಂಚ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಿಜೆಪಿ ರಾಜ್ಯ ಅಧ್ಯಕ್ಷ ಕೆ.ಸುರೇಂದ್ರನ್ ಸೇರಿದಂತೆ ಎಲ್ಲಾ ಆರೋಪಿಗಳು ಕಡ್ಡಾಯವಾಗಿ ಅ. 25ರಂದು ಹಾಜರಾಗುವಂತೆ ಜಿಲ್ಲಾ ಪ್ರಿನ್ಸಿಪಾಲ್ ಸೆಷನ್ಸ್ ನ್ಯಾಯಾಲಯ ಆದೇಶ ನೀಡಿದೆ. ಪ್ರಕರಣವನ್ನು ಬುಧವಾರ ಕೈಗೆತ್ತಿಕೊಂಡಿದ್ದು ನ್ಯಾಯಾಲಯ ಈ ಆದೇಶ ನೀಡಿದೆ. ಈ ಹಿಂದೆ ಮೂರು ಬಾರಿ ಹಾಜರಾಗುವಂತೆ ನೋಟಿಸ್ ನೀಡಿದ್ದರೂ ಹಾಜರಾಗಿಲ್ಲ. ಪ್ರಕರಣವನ್ನು ರದ್ದುಗೊಳಿಸುವಂತೆ ಆರೋಪಿಗಳು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.
ಇದರಿಂದ ನ್ಯಾಯಾಲಯ ಕ್ಕೆ ಹಾಜರಾಗುವ ಅಗತ್ಯ ಇಲ್ಲ ಎಂದು ವಾದಿಸಿದ್ದರು. ಆದರೆ ಕಾನೂನಿನಂತೆ ಆರೋಪಿಗಳು ನ್ಯಾಯಾಲಯಕ್ಕೆ ಹಾಜರಾಗುವಂತೆ ಬಳಿಕ ಅರ್ಜಿಯ ಬಗ್ಗೆ ಮುಂದಿನ ಕ್ರಮ ತೆಗೆದು ಕೊಳ್ಳ ಲಾಗುವುದು ಎಂದು
ಪ್ರಾಸಿಕ್ಯೂಷನ್ ಅಭಿಪ್ರಾಯಪಟ್ಟಿತು . ಈ ಹಿನ್ನಲೆಯಲ್ಲಿ 25ರಂದು ಹಾಜರಾಗುವಂತೆ ಆದೇಶ ನೀಡಿತು .
2021 ರ ವಿಧಾನಸಭಾ ಚುನಾವಣೆ ಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿದ್ದ ಕೆ. ಸುರೇಂದ್ರ ನ್ ಬಿಎಸ್ಪಿ ಅಭ್ಯರ್ಥಿಯಾಗಿದ್ದ ಕೆ.ಸುಂದರರಿಂದ ನಾಮಪತ್ರ ಹಿಂಪಡೆಯಲು ಎರಡೂವರೆ ಲಕ್ಷ ರೂ. ಹಾಗೂ ಮೊಬೈಲ್ ನೀಡಿದ್ದು, ಮಾತ್ರವಲ್ಲ ನಾಮಪತ್ರ ಹಿಂಪಡೆಯುವಂತೆ ಬೆದರಿಕೆಯೊಡ್ಡಲಾಗಿತ್ತು. ಈ ಬಗ್ಗೆ ನ್ಯಾಯಾಲಯದ ಆದೇಶದಂತೆ ಪೊಲೀಸರು ಬದಿಯಡ್ಕ ಪೊಲೀಸರು ಪ್ರಕರಣ ದಾಖಲಿಸಿದ್ದರು. ಬಳಿಕ ಪ್ರಕರಣ ಕ್ರೈಮ್ ಬ್ರಾಂಚ್ ಗೆ ಹಸ್ತಾಂತರಿಸಲಾಗಿತ್ತು. ಪ್ರಕರಣದಲ್ಲಿ ಯುವ ಮೋರ್ಚಾ ರಾಜ್ಯ ಕೋಶಾಧಿಕಾರಿ ಸುನಿಲ್ ನಾಯ್ಕ್, ಬಿಜೆಪಿ ಮಾಜಿ ಜಿಲ್ಲಾದ್ಯಕ್ಷ ಕೆ. ಬಾಲಕೃಷ್ಣ ಶೆಟ್ಟಿ, ಕೆ. ಸುರೇಶ್ ನಾಯಕ್ , ಮಣಿ ಕಂಠ ರೈ, ಲೋಕೇಶ್ ನೊಂಡಾ ಆರೋಪಿಗಳಾಗಿದ್ದಾರೆ