ಉಡುಪಿ, ಅ 12 (DaijiworldNews/HR): ಉಡುಪಿ ಜಿಲ್ಲೆಯಲ್ಲಿ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಓರ್ವ ಬಾಲಕ, ತಾಯಿ ಮತ್ತು ಇಬ್ಬರು ಮಕ್ಕಳು ಸೇರಿದಂತೆ ನಾಲ್ವರು ನಾಪತ್ತೆಯಾಗಿದ್ದಾರೆ.
ನಗರದ ಮಣಿಪಾಲ ಸಗ್ರಿಯ ಸರಕಾರಿ ಬಾಲಕರ ಬಾಲ ಮಂದಿರದಿಂದ ವಾಸವಿದ್ದ ಸುಮಾರು 14-16 ವರ್ಷದ ಶಬೀರ್ ಎಂಬ ಬಾಲಕನು ಸೆಪ್ಟಂಬರ್ 1 ರಿಂದ ನಾಪತ್ತೆಯಾಗಿರುತ್ತಾನೆ. ಎಣ್ಣೆಗಪ್ಪು ಮೈಬಣ್ಣ ಹೊಂದಿದ್ದು, ಹಿಂದಿ ಬಾಷೆ ಮಾತನಾಡುತ್ತಾನೆ.
ಮತ್ತೊಂದು ಪ್ರಕರಣದಲ್ಲಿ ಉಡುಪಿ ತಾಲೂಕು ಪುತ್ತೂರು ಗ್ರಾಮದ ಕೊಡಂಕೂರು ನಿವಾಸಿ ಅಕ್ಷತಾ (25) ಎಂಬ ಮಹಿಳೆಯು ತನ್ನ ಇಬ್ಬರು ಹೆಣ್ಣು ಮಕ್ಕಳಾದ ವಿದ್ಯಾಶ್ರೀ (7) ಹಾಗೂ ಮಲ್ಲು (4) ವಿನೊಂದಿಗೆ ಅಕ್ಟೋಬರ್ 6 ರಂದು ಬೆಳಗ್ಗೆ 8 ಗಂಟೆಯ ಸುಮಾರಿಗೆ ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.
ಅಕ್ಷತಾ 5 ಅಡಿ ಎತ್ತರ, ಸಾಧಾರಣ ಶರೀರ, ಬಿಳಿ ಮೈಬಣ್ಣ, ದುಂಡು ಮುಖ ಹೊಂದಿದ್ದು, ಕನ್ನಡ, ಹಿಂದಿ, ತೆಲುಗು ಹಾಗೂ ತಮಿಳು ಭಾಷೆ ಮಾತನಾಡುತ್ತಾರೆ. ವಿದ್ಯಾಶ್ರೀ 3 ಅಡಿ 6 ಇಂಚು ಎತ್ತರ, ಸಪೂರ ಶರೀರ, ಬಿಳಿ ಮೈಬಣ್ಣ, ದುಂಡು ಮುಖ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ. ಮಲ್ಲು 3 ಅಡಿ ಎತ್ತರ, ಸಾಧಾರಣ ಶರೀರ, ಬಿಳಿ ಮೈಬಣ್ಣ, ದುಂಡು ಮುಖ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣೆಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.