ಮಂಗಳೂರು, ಅ 12 (DaijiworldNews/HR): ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ಮಂಗಳೂರು ನಗರದ ಎಲ್ಲಾ ಪೊಲೀಸ್ ಠಾಣೆಗಳ ವ್ಯಾಪ್ತಿಯ ಸಕ್ರೀಯ ರೌಡಿಗಳ ಪರೇಡ್ ನಡೆಸಲಾಯಿತು.
ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗ್ರವಾಲ್ ಅವರ ನೇತೃತ್ವದಲ್ಲಿ ನಡೆದ ಪರೇಡ್ನಲ್ಲಿ 262 ಸಕ್ರೀಯ ರೌಡಿಗಳನ್ನು ಪೊಲೀಸ್ ಆಯುಕ್ತರ ಮುಂದೆ ಹಾಜರುಪಡಿಸಿದ್ದರು.
ಇನ್ನು ಎಲ್ಲಾ ರೌಡಿಗಳಿಗೆ ತಮ್ಮ ಅಪರಾಧಿಕ ಚಟುವಟಿಕೆಗಳನ್ನು ಬಿಟ್ಟು ಕಾನೂನನ್ನು ಗೌರವಿಸುವ ಪ್ರಜೆಗಳಾಗಬೇಕೆಂದು ಪೊಲೀಸ್ ಆಯುಕ್ತರು ತಿಳಿಸಿದ್ದು, ಇನ್ನು ಮುಂದೆ ಯಾವುದಾದರೂ ಅಪಾರಾಧಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡರೆ ಅವರ ಮೇಲೆ ಕಾನೂನು ರೀತಿಯ ಕಠಿಣ ಕ್ರಮವನ್ನು ಕೈಗೊಳ್ಳಲಾಗುವುದೆಂದು ಎಚ್ಚರಿಕೆ ನೀಡಿದ್ದಾರೆ.