ಮಂಗಳೂರು, ಅ 14 (DaijiworldNews/HR): ಇಸ್ರೇಲ್ ಮತ್ತು ಪ್ಯಾಲೆಸ್ತೀನ್ನ ಹಮಾಸ್ ಉಗ್ರರ ನಡುವಿನ ಯುದ್ಧ ಎಂಟನೇ ದಿನಕ್ಕೆ ಕಾಲಿಟ್ಟಿದ್ದು, ಯುದ್ಧದಲ್ಲಿ ಮೂರು ಸಾವಿರಕ್ಕೂ ಹೆಚ್ಚು ಜನ ಮೃತಪಟ್ಟಿದ್ದಾರೆ. ಇದೀಗ ಮಂಗಳೂರಿನ ವ್ಯಕ್ತಿಯೊಬ್ಬ ಹಮಾಸ್ ಉಗ್ರರನ್ನು ಬೆಂಬಲಿಸಿ ವೀಡಿಯೋ ಹರಿಬಿಟ್ಟಿದ್ದಾನೆ.
ಮಂಗಳೂರಿನ ಬಂದರು ಪ್ರದೇಶದಲ್ಲಿ ತಾಲಿಬನ್ ಎಂಬ ಹೆಸರಿನಲ್ಲಿ ಗುರುತಿಸಿಕೊಂಡಿರುವ ಝಾಕಿರ್ ಎಂಬಾತ ಹಮಾಸ್ ಉಗ್ರರನ್ನು ಬೆಂಬಲಿಸಿ, ಪ್ಯಾಲೇಸ್ಟೈನ್, ಗಾಜಾ ಹಾಗೂ ಹಮಾಸ್ ದೇಶಪ್ರೇಮಿ ಯೋಧರಿಗೆ ಜಯ ಸಿಗಲು ಪ್ರಾರ್ಥಿಸುವಂತೆ ಕರೆ ನೀಡಿ ವೀಡಿಯೋ ಹರಿಬಿಟ್ಟಿದ್ದಾನೆ.
ಇನ್ನು ಈತನ ವಿವಾದಾತ್ಮಕ ಹೇಳಿಕೆಯ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗುತ್ತಿದ್ದಂತೆ ಎಲ್ಲೆಡೆ ಭಾರೀ ಆಕ್ರೋಶ ವ್ಯಕ್ತವಾಗಿದೆ.
ಉಗ್ರರಿಗೆ ಬೆಂಬಲ ಕೊಡುವ ಇವನ ಮೇಲೆ ಮಂಗಳೂರು ಪೊಲೀಸ್ ಇಲಾಖೆ ಕಾನೂನು ಕ್ರಮ ಕೈಗೊಳ್ಳಿ. ಅಧಿಕಾರಿಗಳೇ ದೇಶಪ್ರೇಮಿಗಳು ಎಚ್ಚೆತುಗೊಂಡು ಕಾನೂನು ಕೈಗೆತ್ತಿಕೊಳ್ಳಲು ಅವಕಾಶ ಮಾಡ ಕೊಡಬೇಡಿ. ಕೊಡಲೇ ಝಾಕಿರ್ ನ ಬಂಧನವಾಗಲಿ ಎಂದು ಶರಣ್ ಪಂಪ್ವೆಲ್ ಆಗ್ರಹಿಸಿದ್ದಾರೆ.