ಮಂಗಳೂರು, ಅ 17 (DaijiworldNews/HR): ವಿಶ್ವಕಪ್ ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿದ್ದ ಮಾಹಿತಿ ಮೇರೆಗೆ ನಗರ ಅಪರಾಧ ವಿಭಾಗದ ಮಂಗಳೂರು ಮತ್ತು ಕಾವೂರು ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಅವರು ನಡೆಸಿದ ಎರಡು ಪ್ರತ್ಯೇಕ ದಾಳಿಗಳಲ್ಲಿ ಮೂವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಎರಡು ಪ್ರತ್ಯೇಕ ದಾಳಿಗಳಲ್ಲಿ ಹಳೆಯಂಗಡಿಯ ದೀಪಕ್ (33), ಮರಕಡ ಮೂಲದ ಸಂದೀಪ್ ಶೆಟ್ಟಿ (38) ಮತ್ತು ಸಂದೀಪ್ ಪೈ ( 44) ಬಂಧಿತರು.
ವಿಶ್ವಕಪ್ ಕ್ರಿಕೆಟ್ ಪಂದ್ಯಗಳಲ್ಲಿ ಮೊಬೈಲ್ ಬೆಟ್ಟಿಂಗ್ ಅಪ್ಲಿಕೇಶನ್ಗಳನ್ನು ಬಳಸಿಕೊಂಡು ಕ್ರಿಕೆಟ್ ಬೆಟ್ಟಿಂಗ್ನಲ್ಲಿ ತೊಡಗಿಸಿಕೊಂಡಿದ್ದಾರೆ. ಇವರ ವಿರುದ್ಧ ಕಾವೂರು ಮತ್ತು ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ.
ಈ ದಾಳಿಯಲ್ಲಿ 34000 ರೂ. ಹಣ ಮತ್ತು 5 ಮೊಬೈಲ್ ಫೋನ್ ಗಳನ್ನು ವಶಪಡಿಸಿಕೊಳ್ಳಲಾಗಿದೆ.
ಮಂಗಳೂರು ನಗರ ಪೊಲೀಸ್ ಕಮಿಷನರ್ ಶ್ರೀ ಅನುಪಮ್ ಅಗರವಾಲ್, ಐಪಿಎಸ್ ಅವರ ಮಾರ್ಗದರ್ಶನದಲ್ಲಿ ದಾಳಿಗಳು ನಡೆದಿವೆ.