ಮಂಗಳೂರು, ಅ 17 (DaijiworldNews/HR): ಅರಬ್ಬಿಸಮುದ್ರದ ಲಕ್ಷದ್ವೀಪ ಭಾಗದಲ್ಲಿ ಕಡಿಮೆ ಒತ್ತಡ ಪ್ರದೇಶ ಉಂಟಾಗಿರುವ ಪರಿಣಾಮ ಚಂಡಮಾರುತ ಸೃಷ್ಟಿಯಾಗುವ ಸಾಧ್ಯತೆಯಿದ್ದು ಕರಾವಳಿ ಸೇರಿದಂತೆ ರಾಜ್ಯದ ವಿವಿಧೆಡ ಉತ್ತಮ ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿಗೆ ಎಲ್ಲೋ ಅಲರ್ಟ್ ನೀಡಲಾಗಿದ್ದು, ಮಂಗಳವಾರ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
ಚಂಡಮಾರುತ ಸಾಧ್ಯತೆ ಹಿನ್ನೆಲೆಯಲ್ಲಿ ನವ ಮಂಗಳೂರು ಬಂದರಿಗೆ ಸಂಬಂಧಿಸಿದಂತೆ ಹಡಗುಗಳು, ಬಂದರು. ಬಳಕೆದಾರರು, ಸ್ಟೇಕ್ ಹೋಲ್ಡರ್ ಗಳು ಸುರಕ್ಷಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸೂಚಿಸಲಾಗಿದೆ.
ಬಂದರಿನಿಂದ ತೆರಳುವ ಹಡಗುಗಳ ಚಂಡಮಾರುತ ಸಮೀಪಿಸುವ ಮುನ್ನವೇ ಮುನ್ನೆಚ್ಚರಿಕೆಯೊಂದಿಗೆ ತೆರಳ ಬೇಕು ಎಂದು ಬಂದರು ಆಡಳಿತ ಸೂಚನೆ ನೀಡಿದೆ.