ಸುಳ್ಯ,ಏ13(AZM):ಮಂಗಳೂರಿನಲ್ಲಿ ನಡೆದ ಸಂಕಲ್ಪ ರ್ಯಾಲಿಗೆ ಯುವಕನೊಬ್ಬ ಬಸ್ಸಿನಲ್ಲಿ ಬರುತ್ತಿದ್ದ ವೇಳೆ ಬಸ್ಸಿನಿಂದ ಕಾಲು ಜಾರಿ ಬಿದ್ದ ಪರಿಣಾಮ ಗಾಯಗಳಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸುಳ್ಯ ತಾಲೂಕಿನ ಮರ್ಕಂಜ ಗ್ರಾಮದ ಕುಮಾರ್ (30) ಗಾಯಗೊಂಡಿರುವ ಯುವಕ. ಅಪಘಾತ ನಡೆದ ಸುದ್ದಿ ತಿಳಿದಂತೆ ದಕ್ಷಿಣ ಕನ್ನಡ ಬಿಜೆಪಿ ಲೋಕಸಭಾ ಸದಸ್ಯ ಶ್ರೀ ನಳಿನ್ ಕುಮಾರ್ ಕಟೀಲ್, ಪುತ್ತೂರು ಶಾಸಕ ಸಂಜೀವ ಮಠಂದೂರು, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ರವಿಶಂಕರ್ ಮಿಜಾರ್ ಹಾಗೂ ವಿಶ್ವ ಹಿಂದೂ ಪರಿಷತ್ ಮುಖಂಡ ಜಗದೀಶ್ ಶೇಣವ ಅವರ ಜೊತೆ ಆಸ್ಪತ್ರೆಗೆ ಭೇಟಿ ನೀಡಿ ಗಾಯಗೊಂಡ ಯುವಕನ ಯೋಗಕ್ಷೇಮ ವಿಚಾರಿಸಿದ್ದಾರೆ.