ಉಡುಪಿ, ಅ 17 (DaijiworldNews/HR): ಕರಾವಳಿ ಹೋಟೆಲಿನ ಆವರಣದಲ್ಲಿ ವ್ಯಕ್ತಿಯೊಬ್ಬ ಮೃತಪಟ್ಟಿದ್ದು ಮೇಲ್ನೋಟಕ್ಕೆ ಕೊಲೆಯಾಗಿರುವ ಶಂಕೆ ವ್ಯಕ್ತವಾಗಿದೆ.
ಮಾಹಿತಿ ಪಡೆದ ಸಮಾಜ ಸೇವಕ ವಿಶು ಶೆಟ್ಟಿ ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸ್ ಅಧಿಕಾರಿ ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ. ಕೆಎಂಸಿ ಮಣಿಪಾಲ ಹಾಗೂ ಮಂಗಳೂರಿನ ನ್ಯಾಯ ವಿಜ್ಞಾನ ಪ್ರಯೋಗಾಲಯದವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಹರಿತವಾದ ಆಯುಧದಿಂದ ವ್ಯಕ್ತಿಯ ಬಲ ಕೈ ಕಡಿದಿದ್ದು ತೀವ್ರ ರಕ್ತಸ್ರಾವವೇ ಸಾವಿಗೆ ಕಾರಣವಿರಬಹುದು ಎಂದು ಮೇಲ್ನೋಟಕ್ಕೆ ಕಂಡುಬಂದಿದೆ.
ಉಡುಪಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ವಿಶು ಶೆಟ್ಟಿಯವರು ಕೆಎಂಸಿ ಶವಾಗಾರದಲ್ಲಿ ಶವ ಇಡಲು ಪೊಲೀಸರಿಗೆ ಸಹಕರಿಸಿದ್ದಾರೆ. ಸಾಮಾಜಿಕ ಕಾರ್ಯಕರ್ತ ನಿತ್ಯಾನಂದ ಒಳಕಾಡು, ವಿಶು ಶೆಟ್ಟಿ ಹಾಗೂ ರಾಮದಾಸ್ ಪಾಲನ್ ಕಾನೂನು ಪ್ರಕ್ರಿಯೆಗೆ ಸಹಕರಿಸಿದ್ದಾರೆ. ಸಂಬಂಧಿಕರು ಅಥವಾ ಸಂಬಂಧ ಪಟ್ಟವರು ಠಾಣೆಗೆ ಸಂಪರ್ಕಿಸುವಂತೆ ಕೋರಲಾಗಿದೆ.