ಮಂಗಳೂರು, ಅ 19 (DaijiworldNews/MS): ಮಂಗಳದೇವಿ ದೇವಸ್ಥಾನ ವಠಾರದಲ್ಲಿ ವ್ಯಾಪಾರಕ್ಕೆ ಸಂಬಂಧಿಸಿದ ಹೇಳಿಕೆ ನೀಡಿರುವ ವಿಹಿಂಪ ಪ್ರಾಂತ್ಯ ಸಹಕಾರ್ಯದರ್ಶಿ ಶರಣ್ ಪಂಪ್ವೆಲ್ ವಿರುದ್ಧ ಶಾಂತಿಭಂಗ ಹಾಗೂ ಕೋಮು ಪ್ರಚೋದನೆ ಆರೋಪದಡಿ ಪ್ರಕರಣ ದಾಖಲಾಗಿದೆ.
ಮಂಗಳಾದೇವಿ ದೇವಸ್ಥಾನದ ನವರಾತ್ರಿ ಜಾತ್ರಾ ಮಹೋತ್ಸವದಲ್ಲಿ ಮುಸ್ಲಿಮರ ವ್ಯಾಪಾರಕ್ಕೆ ನಿರ್ಬಂಧಿಸುವಂತೆ ಹಿಂದೂ ಸಂಘಟನೆಗಳು ಕರೆ ನೀಡಿತ್ತು. ಈ ಹಿನ್ನಲೆ ವಿವಾದಕ್ಕೆ ಕಾರಣವಾಗಿತ್ತು. ಬಳಿಕ ಮಧ್ಯೆ ಪ್ರವೇಶಿಸಿದ ಜಿಲ್ಲಾಡಳಿತ ಹಿಂದೂಯೇತರರಿಗೂ ಅಂಗಡಿ ಇಡಲು ಅನುಮತಿ ನೀಡಲಾಗಿತ್ತು. ಹೀಗಾಗಿ ಹಿಂದೂ ವ್ಯಕ್ತಿಗಳ ಅಂಗಡಿಗಳ ಮೇಲೆ ಕೇಸರಿ ಧ್ವಜ ಇಟ್ಟು ಎಲ್ಲಾ ಹಿಂದುಗಳು ಸಾಮಗ್ರಿಗಳನ್ನು ಹಿಂದುಗಳ ಅಂಗಡಿಗಳಿಂದಲೇ ಪಡೆದುಕೊಳ್ಳುವಂತೆ ಹೇಳಿಕೆ ನೀಡಿದ್ದರು. ಅ.16ರಂದು ಮಂಗಳಾದೇವಿಯ ರಥಬೀದಿಯ ಹಿಂದೂಗಳ ಸ್ಟಾಲ್ಗಳಿಗೆ ವಿಶ್ವ ಹಿಂದೂ ಪರಿಷತ್ ಭಗವಾನ್ಧ್ಬಜ ಕಟ್ಟಿದ್ದರು.
ಸಾಮರಸ್ಯಕ್ಕೆ ಧಕ್ಕೆ ಮಾಡಿದ್ದಾರೆ ಎಂದು ಪೊಲೀಸರು ಶರ ಪಂಪ್ ವೆಲ್ ವಿರುದ್ದ ಶಾಂತಿಭಂಗ ಹಾಗೂ ಕೋಮು ಪ್ರಚೋದನೆ ಆರೋಪದಡಿ , ಐಪಿಸಿ 153A, 34 ಅಡಿಯಲ್ಲಿ ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.