ವಿಟ್ಲ, ಅ.23 (DaijiworldNews/AK): ಸ್ಕೂಟಿ ಮತ್ತು ಆಟೋ ರಿಕ್ಷಾ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಆಟೋ ಪ್ರಯಾಣಿಕ ಮೃತಪಟ್ಟ ಘಟನೆ ಪೆರುವಾಯಿ-ಬೆರಿಪದವು ರಸ್ತೆಯಲ್ಲಿ ನಡೆದಿದೆ.
ಆಟೋ ಪ್ರಯಾಣಿಕ ಪೆರುವೋಡಿ ನಿವಾಸಿ ನಾಗೇಶ್ ಮೃತ ದುರ್ದೈವಿ.ಪೆರುವಾಯಿ-ಬೆರಿಪದವು ರಸ್ತೆಯಲ್ಲಿ ಇನ್ನೊಂದು ವಾಹನವನ್ನು ಓವರ್ ಟೇಕ್ ಮಾಡುವ ಭರದಲ್ಲಿ ಸ್ಕೂಟಿ ಮತ್ತು ಆಟೋರಿಕ್ಷಾ ಮುಖಾಮುಖಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಅಪಘಾತದ ತೀವ್ರತೆಗೆ ಗಂಭೀರ ಗಾಯಗೊಂಡಿದ್ದ ಆಟೋ ಪ್ರಯಾಣಿಕ ನಾಗೇಶ್ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆಯೇ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.