ಮಂಗಳೂರು, ಅ 24 (DaijiworldNews/HR): ಸ್ಟೇಟ್ಬ್ಯಾಂಕ್ ಬಳಿ ಖಾಸಗಿ ಬಸ್ಸೊಂದು ಢಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಸ್ಥಳದಲ್ಲೇ ಮೃತಪಟ್ಟ ಘಟನೆ ವರದಿಯಾಗಿದೆ.
ಬಸ್ ಸ್ಟೇಟ್ಬ್ಯಾಂಕ್ ಸಮೀಪದ ರಾವ್ ಆ್ಯಂಡ್ ರಾವ್ ಸರ್ಕಲ್ ಬಳಿ ಪಾದಚಾರಿಗೆ ಢಿಕ್ಕಿ ಹೊಡೆದಿದ್ದು ಗಂಭೀರ ಗಾಯಗೊಂಡ ಪಾದಚಾರಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಇನ್ನು ಖಾಸಗಿ ಬಸ್ ಚಾಲಕನ ಅಜಾಗರೂಕತೆ ಮತ್ತು ನಿರ್ಲಕ್ಷ್ಯದ ಚಾಲನೆಯಿಂದ ಈ ಅಪಘಾತ ಸಂಭವಿಸಿದೆ ಎಂದು ಪೋಲಿಸರು ತಿಳಿಸಿದ್ದಾರೆ.