ಕಾರ್ಕಳ, ಅ 24 (DaijiworldNews/AK): ಥೀಮ್ ಪಾರ್ಕ್ನಲ್ಲಿರುವ ಪರಶುರಾಮನ ಪ್ರತಿಮೆಯ ವಿಚಾರವಾಗಿ ಆರೋಪಗಳು ಸುಳ್ಳೆಂದು ದೇಗುಲದಲ್ಲಿ ಪ್ರಮಾಣ ಮಾಡಿ ಸಾಬೀತುಪಡಿಸಿದರೆ ನಾನು ಕ್ಷಮೆ ಕೇಳಿ ರಾಜಕೀಯ ನಿವೃತ್ತಿಯಾಗುತ್ತೇನೆ ಎಂದು ಶಾಸಕ ಸುನಿಲ್ ಕುಮಾರ್ಗೆ ಪುರಸಭಾ ಸದಸ್ಯ ಕಾಂಗ್ರೆಸ್ ವಕ್ತಾರ ಶುಭದರಾವ್ ಸವಾಲು ಹಾಕಿದ್ದಾರೆ.
ಈ ಕುರಿತು ವಿಡಿಯೋ ಬಿಡುಗಡೆ ಮಾಡಿ ಮಾತನಾಡಿದ ಅವರು, ಕಾರ್ಯಕರ್ತರ ಸಭೆಯಲ್ಲಿ ಶಾಸಕರು ನೀಡಿದ ಹೇಳಿಕೆ ಸಮರ್ಥನೆಯೇ ಹೊರತು ಅದೇ ಸತ್ಯವಲ್ಲ ಎಂದು ಪುರಸಭಾ ಸದಸ್ಯ ಕಾಂಗ್ರೇಸ್ ವಕ್ತಾರ ಶುಭದರಾವ್ ಆರೋಪಿಸಿದ್ದಾರೆ.
ಭಾಷೆಯ ಎಲ್ಲೆ ಮೀರಿ ಆಡಿದ ಅಸಭ್ಯ ಮತ್ತು ಅವಹೇಳನ ಮಾತುಗಳಿಂದ ಏನೂ ಸಾಧಿಸಿದಂತೆ ಆಗುದಿಲ್ಲ. ಧರ್ಮದ ದುರ್ಬಳಕೆಯೇ ಭಿಕ್ಷೆ ಬೇಡುವ ಪರಿಸ್ಥಿತಿಗೆ ತರುತ್ತದೆ ಎನ್ನುವುದು ನಿಮ್ಮ ಮಾತಿನಿಂದ ಸಾಬೀತಾಗಿದೆ, ಮಾಡಿದ ಆರೋಪಗಳು ಸುಳ್ಳೆಂದು ದೇಗುಲದಲ್ಲಿ ಪ್ರಮಾಣ ಮಾಡಿ ಸಾಬೀತುಪಡಿಸಿ.ಅಂದೇ ನಮ್ಮ ನಡುವಿನ ರಾಜಕೀಯ ಸಂಘರ್ಷ ಕೊನೆಯಾಗಲಿ ಪ್ರಮಾಣ ಮಾಡವ ಸ್ಥಳ, ಸಮಯ, ದಿನಾಂಕವನ್ನು ನೀವೇ ನಿರ್ಧರಿಸಿ ಎಂದು ಪುರಸಭಾ ಸದಸ್ಯ ಕಾಂಗ್ರೆಸ್ ವಕ್ತಾರ ಶುಭದರಾವ್ ಸವಾಲು ಹಾಕಿದ್ದಾರೆ.
ಬಿಜೆಪಿಯ ಕಚೇರಿಯಲ್ಲಿ ಕಾರ್ಯಕರ್ತರ ಸಭೆಯಲ್ಲಿ ಪರಶುರಾಮನ ಪ್ರತಿಮೆ ಬಗ್ಗೆ ಅವರು ನೀಡಿದ ಸಮರ್ಥನೆ ಸುಳ್ಳಿನಿಂದ ಕೂಡಿದೆ, ತನ್ನ ಮೇಲೆ ಬಂದ ಆರೋಪಗಳನ್ನು ಕಾರ್ಯಕರ್ತರ ಸಭೆ ಕರೆದು ಅವರ ಮುಂದೆ ಹೇಳುವ ದುಸ್ತಿತಿ ಅವರಿಗೆ ಬಂದಿರುವುದು ನಮ್ಮ ದುರಂತ ಅವರ ಮೇಲೆ ಮಾಡಿದ ಅರೋಪಗಳಲ್ಲಿ ಒಂದನ್ನು ಸಾಬೀತುಪಡಿಸಲು ಸಾಧ್ಯವಾಗಿಲ್ಲ ಎಂದು ಆರೋಪಿಸಿದರು.
ಅವರು ದೇಗುಲದಲ್ಲಿ ಪ್ರಮಾಣಕ್ಕೆ ಬರುವ ಮೂಲಕ ಆರೋಪಗಳೆಲ್ಲವೂ ಸುಳ್ಳೆಂದು ಸಾಬೀತುಪಡಿಸಲು ಒಳ್ಳೆಯ ಅವಕಾಶವಿದೆ .ಸವಾಲನ್ನು ಸ್ವೀಕರಿಸಲಿ ಇಲ್ಲವಾದಲ್ಲಿ ತಪ್ಪನ್ನು ಒಪ್ಪಿಕೊಂಡಂತೆ ಎಂದು ಹೇಳಿದ್ದಾರೆ.
ಅಲ್ಲದೇ ಥೀಮ್ ಪಾರ್ಕ್ ಸಂಬಂಧಿಸಿದಂತೆ ಶಾಸಕ ಸುನಿಲ್ ಕುಮಾರ್ ಗೆ ವಿಡಿಯೋ ಮೂಲಕ ಐದು ಪ್ರಶ್ನೆಯನ್ನ ಮುಂದಿಟ್ಟಿದ್ದಾರೆ. ವಿಡಿಯೋ ಪ್ರತಿಮೆ ಸ್ಥಾಪನೆಯ ಸಂದರ್ಭದಲ್ಲಿ ಚಿತ್ರೀಕರಣ ಮಾಡಿದ್ದೇ ಅಥವಾ ಪ್ರತಿಮೆ ತೆರವುಗೊಳಿಸುವಾಗ ಚಿತ್ರೀಕರಣ ಮಾಡಿದ್ದೆ?. ಈ ವಿಡಿಯೋದಲ್ಲಿ ದಾಖಲಾಗಿರುವಂತೆ ಕೈನ್ ಮೂಲಕ ಎತ್ತಿದ ಪರಶುರಾಮನ ಎದೆಯ ಮೇಲಿನ ಭಾಗ ಕಂಚಿನದ್ದೇ ಮತ್ತು ರಾಜ್ಯದ ಮುಖ್ಯಮಂತ್ರಿಯಾಗಿದ್ದ ಬಸವರಾಜ್ ಬೊಮ್ಮಾಯಿಯವರು ಉದ್ಘಾಟಿಸಿದ್ದ ಪರಶುರಾಮನ ಪ್ರತಿಮೆ ಸಂಪೂರ್ಣ ಕಂಚಿನದ್ದೇ?
ಪ್ರತಿಮೆಯ ಮೇಲ್ಬಾಗ ತೆರವು ವಿಚಾರವಾಗಿ ಜಿಲ್ಲಾಡಳಿತ, ಪೋಲೀಸ್, ಮತ್ತು ನಿರ್ಮಿತಿ ಕೇಂದ್ರ ಮೇಲೆ ತಾವು ಒತ್ತಡ ಹೇರಳಿಲ್ಲವೇ?. ಕಾಂಗ್ರೇಸ್ ಅನುದಾನ ತಡೆ ಹಿಡಿದಿದೆ ಎಂದು ಹೇಳಿದ ತಮ್ಮ ಆರೋಪ ಸರಿಯೇ?ಈ ಎಲ್ಲ ಸವಾಲುಗಳಿಗೆ ತಾವು ದೇಗುಲದಲ್ಲಿ ಪ್ರಮಾಣ ಮಾಡಿ ಸಾಬೀತುಪಡಿಸಿ ಎಂದು ಶುಭದರಾವ್ ಸವಾಲೆಸೆದಿದ್ದಾರೆ.