ಉಡುಪಿ, ಅ 28 (DaijiworldNews/AK):ಬ್ರಹ್ಮಾವರ ಸಕ್ಕರೆ ಕಾರ್ಖಾನೆ 13 ಕೋಟಿ ಹಗರಣ ವಿಚಾರ ಹಗರಣ ಆಗಿದ್ದರೆ ತನಿಖೆ ಮಾಡಿಸುತ್ತೇವೆ. ತಪ್ಪು ಮಾಡಿದವರ ಮೇಲೆ ಕ್ರಮ ಕೈಗೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಮಾಧ್ಯಮಕ್ಕೆ ಪ್ರತಿಕ್ರಿಯಿಸಿ ಅವರು, ಕಾರ್ಕಳ ಪರಶುರಾಮ ಥೀಮ್ ಪಾರ್ಕ್ ವ್ಯವಹಾರ ಕುರಿತು ತನಿಖೆಯ ಭರವಸೆಯನ್ನು ನೀಡಿದರು.
ಕಾಂಗ್ರೆಸ್ ಶಾಸಕರಿಗೆ ಬಿಜೆಪಿಯಿಂದ 50 ಕೋಟಿ ಆಫರ್ ವಿಚಾರವಾಗಿ ಮಾತನಾಡಿ, ಆ ವಿಚಾರ ನನಗೆ ಗೊತ್ತಿಲ್ಲ. ರವಿ ಗಾಣಿಗ ಬಳಿಯೇ ಕೇಳಿ ಎಂದರು.
ಬಿಜೆಪಿ ನಮ್ಮ ಸರ್ಕಾರವನ್ನು ಅಸ್ಥಿರಗೊಳಿಸಲು ಪ್ರಯತ್ನ ಮಾಡುತ್ತಿರುವುದು ನಿಜ. ಬಿಜೆಪಿಯವರು ಈ ಪ್ರಯತ್ನದಲ್ಲಿ ಸಫಲ ಆಗಲ್ಲ ಎಂದರು.
ಬಿಜೆಪಿಯವರು ಹಗಲುಗನಸು ಕಾಣುತ್ತಿದ್ದಾರೆ.ಒಮ್ಮೆ ಆಪರೇಷನ್ ಕಮಲ ಮಾಡಿ ಸಕ್ಸಸ್ ಆಗಿರಬಹುದು.ಆದರೆ ಯಾವಾಗಲೂ ಹಾಗೆ ಆಗಲ್ಲ ವಿಫಲ ಪ್ರಯತ್ನ.ಬಿಜೆಪಿಯವರಿಗೆ ಅಧಿಕಾರದ ದಾಹ ಅಧಿಕಾರಕ್ಕೋಸ್ಕರ ಏನು ಬೇಕಾದರೂ ಮಾಡುತ್ತಾರೆ.ನಮ್ಮ ಪಕ್ಷದ ಒಬ್ಬ ಶಾಸಕನೂ ಅವರ ಆಮಿಷಕ್ಕೆ ಒಳಗಾಗಲ್ಲ ಎಂದು ಕಿಡಿ ಕಾರಿದರು.
ಇದೇ ವೇಳೆ ರಾಮನಗರ ಬೆಂಗಳೂರು ಸೇರ್ಪಡೆ ವಿಚಾರ ಮಾತನಾಡಿ, ನನ್ನ ಜೊತೆ ಈ ಬಗ್ಗೆ ಯಾರು ಚರ್ಚೆ ಮಾಡಿಲ್ಲ.ಸರಕಾರಿ ಮಟ್ಟದಲ್ಲಿ ಈ ಬಗ್ಗೆ ಚರ್ಚೆ ಆಗಿಲ್ಲ ಎಂದು ತಿಳಿಸಿದರು.