ಕಾಸರಗೋಡು ,ಅ. 30 (DaijiworldNews/AK): ಹಲವು ಬೇಡಿಕೆಗಳನ್ನು ಮುಂದಿಟ್ಟುಕೊಂಡು ಖಾಸಗಿ ಬಸ್ಸು ಮಾಲೀಕರು ನಾಳೆ 31 ರಂದು ಕೇರಳ ರಾಜ್ಯವ್ಯಾಪಿ ಸಂಚಾರ ಸ್ಥಗಿತಗೊಳಿಸಿ ಮುಷ್ಕರ ನಡೆಸಲಿದ್ದಾರೆ.
ಬೇಡಿಕೆ ಈಡೇರಿಸದಿದ್ದಲ್ಲಿ ನ.21 ರಿಂದ ಅನಿರ್ಧಿಷ್ಟಾವಧಿ ಮುಷ್ಕರ ನಡೆಸುವುದಾಗಿ ಮಾಲೀಕರ ಸಂಘದ ಮುಖಂಡರು ತಿಳಿಸಿದ್ದಾರೆ.
ಜೂ.5 ರಂದು ಸರಕಾರ ನೀಡಿದ ಭರವಸೆ ಈಡೇರಿಸಿಲ್ಲ . ಬಡವರಿಗೆ ಸಾರಿಗೆ ನಿಗಮದ ಬಸ್ಸುಗಳಲ್ಲಿ ಉಚಿತ ಪ್ರಯಾಣ ಘೋಷಿಸಿರುವ ರಾಜ್ಯ ಸರಕಾರದ ಏಕಪಕ್ಷೀಯ ನಿರ್ಧಾರ ಹಿಂದಕ್ಕೆ ಪಡೆಯಬೇಕು ಎಂದು ಒತ್ತಾಯಿಸಿದ್ದಾರೆ.
ವಿದ್ಯಾರ್ಥಿಗಳ ರಿಯಾಯಿತಿ ಪ್ರಯಾಣ ದರ ಹೆಚ್ಚಿಸಬೇಕು , ಬಸ್ಸುಗಳಲ್ಲಿ ಕ್ಯಾಮರಾ ಅಳವಡಿಕೆ ಹಾಗೂ ಸೀಟ್ ಬೆಲ್ಟ್ ಕಡ್ಡಾಯ ದಿಂದ ವಿನಾಯಿತಿ ನೀಡಬೇಕು , ದೂರಮಿತಿ ನೋಡದೆ ಖಾಸಗಿ ಬಸ್ಸು ಗಳ ಪರವಾನಿಗೆ ನವೀಕರಿಸಬೇಕು ಮೊದಲಾದ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಮುಷ್ಕರ ನಡೆಸಲಾಗುವುದು ಎಂದು ಸಂಘದ ಜಿಲ್ಲಾಧ್ಯಕ್ಷ ಕೆ , ಗಿರೀಶ್ , ರಾಜ್ಯಕಾರ್ಯದರ್ಶಿ ಸತ್ಯನ್ ಪೂಚಕ್ಕಾಡ್ , ಟಿ . ಲಕ್ಷ್ಮಣನ್ , ಸಿ . ಎ ಮುಹಮ್ಮದ್ ಕುಂಞ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.