ಪುತ್ತೂರು, ಅ 31(DaijiworldNews/PC/AK):ಬಡಗನ್ನೂರು ಗ್ರಾಮದ ಕೊಯಿಲಾ ದಲ್ಲಿ ನಡೆದ ಅಡಿಕೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ಕು ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ.
ಆರೋಪಿಗಳಾದ ಶ್ರವಣ್ ಕೆ, (20),ಜಯಚಂದ್ರ, (21), ಅಶೋಕ, (24) ,ಪುನೀತ್ (20) ಬಂಧಿತರು ಎಂದು ಗುರುತಿಸಲಾಗಿದೆ.ಬಡಗನ್ನೂರು ಗ್ರಾಮದ ಕೊಯಿಲಾ ಎಂಬಲ್ಲಿ, ಹಳೆಯ ಮನೆಯ ಕೊಟ್ಟಿಗೆಯ ಅಟ್ಟದಲ್ಲಿದ್ದ, ಸುಲಿಯದ ಸುಮಾರು 23 ಗೋಣಿ ಅಡಿಕೆ ಕಳ್ಳತನ ಮಾಡಿದ್ದಾರೆ.
ಆರೋಪಿಗಳು, ಕಳವು ಮಾಡಲು ಉಪಯೋಗಿಸಿದ ಸ್ವಿಪ್ಟ್ ಕಾರು ಮತ್ತು ಆಟೋ ರಿಕ್ಷಾವನ್ನು ಪೊಲೀಸರು ವಶಪಡಿಸಿಕೊಳ್ಳಲಾಗಿದೆ. ಒಟ್ಟು ಸುಮಾರು 4,15,925 ರೂ. ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆಯಲಾಗಿದೆ.
ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸ್ ಉಪ ನಿರೀಕ್ಷಕರಾದ ಧನಂಜಯ ಬಿ.ಸಿ ರವರ ನೇತೃತ್ವದ ತಂಡದಿಂದ ಕಾರ್ಯಾಚರಣೆ ನಡೆಸಲಾಯಿತು.