ಕಾಸರಗೋಡು, ನ 1 (DaijiworldNews/MS): ಕುಂಬಳೆಯಲ್ಲಿ ನಡೆದ ಘಟನೆಯೊಂದಕ್ಕೆ ಸಂಬಂಧಪಟ್ಟಂತೆ ವಿಡಿಯೋ ದೃಶ್ಯಗಳನ್ನು ಬಳಸಿ ಧಾರ್ಮಿಕ ಭಾವನೆ ಕೆರಳಿಸುವ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿದ ಬಿಜೆಪಿ ರಾಷ್ಟ್ರೀಯ ವಕ್ತಾರ ಅನಿಲ್ ಆಂಟನಿ ವಿರುದ್ಧ ಕಾಸರಗೋಡು ಸೈಬರ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಎಸ್ . ಎಫ್ ಐ ಜಿಲ್ಲಾ ಕಾರ್ಯದರ್ಶಿ ಎಂ . ಟಿ ಸಿದ್ದಾರ್ಥನ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ನೀಡಿದ ದೂರಿನಂತೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಕಾಲೇಜು ಸಮೀಪ ಬಸ್ಸು ನಿಲುಗಡೆಗೆ ಒತ್ತಾಯಿಸಿ ಕಾಲೇಜು ವಿದ್ಯಾರ್ಥಿಗಳು ಬಸ್ಸು ತಡೆದ ದೃಶ್ಯಗಳನ್ನು ಬಳಸಿ ಅಪಪ್ರಚಾರ ನಡೆಸಿದ, ಹಿನ್ನಲೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ