ಸುಳ್ಯ, ನ 03 (DaijiworldNews/AA): ಕಳಂಜದ ಮಸೂದ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನಗೊಳಪಟ್ಟು ಜೈಲಿನಲ್ಲಿರುವ ಇಬ್ಬರು ಆರೋಪಿಗಳಿಗೆ ಹೈಕೋರ್ಟ್ ನಿಂದ ಜಾಮೀನು ಮಂಜೂರಾಗಿದೆ.
2022ರಲ್ಲಿ ಸುಳ್ಯ ಕಳಂಜದಲ್ಲಿ ನಡೆದಿದ್ದ ಮಸೂದ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾಗಿ ಜೈಲಿನಲ್ಲಿರುವ ಅಭಿಲಾಷ್ ಮತ್ತು ಸುನಿಲ್ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಅರ್ಜಿಯನ್ನು ಪರಿಗಣಿಸಿದ ಕರ್ನಾಟಕದ ಉಚ್ಚ ನ್ಯಾಯಾಲಯದ ಏಕಸದಸ್ಯ ಪೀಠದ ನ್ಯಾಯಮೂರ್ತಿಗಳಾದ ಜಸ್ಟಿಸ್ ವಿಶ್ವಜೀತ್ ಎಸ್ ಶೆಟ್ಟಿ ನವೆಂಬರ್ 2 ರಂದು ಜಾಮೀನು ಮಂಜೂರು ಮಾಡಿದ್ದಾರೆ.
ಆರೋಪಿಗಳಾದ ಅಭಿಲಾಷ್ ಮತ್ತು ಸುನಿಲ್ ಪರವಾಗಿ ಹಿರಿಯ ವಕೀಲರಾದ ಅರುಣ್ ಶ್ಯಾಮ್ ಅವರು ವಾದ ಮಂಡಿಸಿದ್ದು, ವಕೀಲರಾದ ಸುಯೋಗ್ ಹೇರಳೆ ಮತ್ತು ನಿಶಾಂತ್ ಕುಶಾಲಪ್ಪ ವಕಾಲತ್ತು ವಹಿಸಿದ್ದರು.