ಮಂಗಳೂರು, ನ 3 (DaijiworldNews/PC): ಸೌದಿ ಅರೇಬಿಯಾದ್ ಕೆಲಸ ಮಾಡುತ್ತಿದ್ದ ಮಂಗಳೂರಿನ ಯುವಕನೋರ್ವ ಹೃದಯಾಘಾತವಾಗಿ ಮೃತಪಟ್ಟಿರುವ ಘಟನೆ ಗುರುವಾರ ಬೆಳಗ್ಗೆ ನಡೆದಿದೆ.
ಮೃತರನ್ನು ಜೋಕಟ್ಟೆಯ ಕೆಬಿಎಸ್ ನಿವಾಸಿ ಅಬ್ದುಲ್ ರಝಾಕ್ ಅವರ ಪುತ್ರ ಇರ್ಷಾದ್(33) ಎಂದು ಗುರುತಿಸಲಾಗಿದೆ.ಇರ್ಷಾದ್ ಗೆ ಗುರುವಾರ ಬೆಳಗ್ಗೆ ಹೃದಯಾಘಾತ ಸಂಭವಿಸಿದ್ದು ತಕ್ಷಣ ಅವರ ಗೆಳೆಯರು ಸ್ಥಳೀಯ ಆಸ್ಪತ್ರೆಗೆ ಕರೆದುಕೊಂಡು ಹೋದರೂ ವೈದ್ಯರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ.
ಇರ್ಷಾದ್ ಅವರು ಸುಮಾರು 7 ವರ್ಷಗಳ ಹಿಂದೆ ಸೌದಿ ಅರೇಬಿಯಾದಲ್ಲಿ ಇಲೆಕ್ಟ್ರಾನಿಕ್ ಅಂಗಡಿಯೊಂದಲ್ಲಿ ಕೆಲಸ ಮಾಡುತ್ತಿದ್ದರು. ಇತ್ತೀಚಿಗೆ ಒಂದೂವರೆ ತಿಂಗಳ ಹಿಂದೆಯಷ್ಟೇ ಊರಿಗೆ ಬಂದು ಸೌದಿಗೆ ತೆರಳಿದ್ದರು ಎನ್ನಲಾಗಿದೆ.