ಮಂಗಳೂರು,ಏ 15 (MSP): ಮಂಗಳೂರು ವಿಮಾನ ನಿಲ್ದಾಣದವನ್ನು ಖಾಸಗೀಕರಣ ಮಾಡುವ ಕುರಿತು ಇದುವರೆಗೆ ಯಾವುದೇ ಅಂತಿಮ ನಿರ್ಧಾರ ಆಗಿಲ್ಲ ಎಂದು ಕೇಂದ್ರ ಸಚಿವ ಸುರೇಶ್ ಪ್ರಭು ಹೇಳಿದರು.
ನಗರದ ಖಾಸಗಿ ಹೋಟೇಲ್ ನಲ್ಲಿ ಪಕ್ಷದ ಪ್ರಚಾರಕ್ಕಾಗಿ ಆಗಮಿಸಿದ ಅವರು ಪತ್ರಿಕಾಗೋಷ್ಟಿ ನಡೆಸಿ ಮಾತನಾಡಿ, ಮಂಗಳೂರು ವಿಮಾನ ನಿಲ್ದಾಣದ ಖಾಸಗೀಕರಣಕ್ಕೆ ಸಂಬಂಧಪಟ್ಟಂತೆ ಪೈನಲ್ ನಿರ್ಧಾರ ಆಗಿಲ್ಲ. ಮೊದಲಿಗೆ ವಿಮಾನ ಸೌಕರ್ಯದ ಆಧುನೀಕರಣಕ್ಕೆ ಒತ್ತು ನೀಡಲಾಗಿದೆ. ಗ್ಲೋಬಲ್ ಏವಿಯೇಷನ್ ಸಮಿಟ್ ಮೂಲಕ ಈ ನಿಟ್ಟಿನಲ್ಲಿ ರೂಪುರೇಷೆ ಹಾಕಲಾಗಿದೆ ಎಂದರು. ದೇಶದಲ್ಲಿ ಇನ್ನೂ 100 ವಿಮಾನ ನಿಲ್ದಾಣಗಳನ್ನು ನಿರ್ಮಾಣ ಮಾಡಲಾಗುತ್ತಿದ್ದು ಇದಲ್ಲದೆ, ಇನ್ನೂ 200 ವಿಮಾನ ನಿಲ್ದಾಣಗಳು ಬರಲಿವೆ ಎಂದರು.
ಕೇಂದ್ರ ಸರ್ಕಾರವೂ ಮತ್ಸ್ಯೋದ್ಯಮಕ್ಕೆ ಉತ್ತೇಜನೆ, ರೈತಾಪಿ ಜನರ ಆದಾಯ ಹೆಚ್ಚಳ ಉದ್ಯೋಗ ಸೃಷ್ಟಿಗೆ ಹೆಚ್ಚಿನ ಒತ್ತು ನೀಡಿದ್ದು, ನರೇಂದ್ರ ಮೋದಿ ಮತ್ತೊಮ್ಮೆ ಅಧಿಕಾರಕ್ಕೆ ಬರುವುದು ಶತಸಿದ್ದ. ಕ್ಷೇತ್ರದ ಅಭಿವೃದ್ದಿಗಾಗಿ ನಳಿನ್ ಕುಮಾರ್ ಕಟೀಲ್ ಶ್ರಮಿಸಿದ್ದು ಮುಂದೆ ಅಧಿಕಾರಕ್ಕೆ ಬರುವ ಸರ್ಕಾರದಲ್ಲಿ ನಳಿನ್ ಕುಮಾರ್ ಕಟೀಲ್ ಮಹತ್ವದ ಪಾತ್ರ ವಹಿಸಲಿದ್ದಾರೆ ಎಂದು ತಿಳಿಸಿದರು.
ಪತಿಕಾಗೋಷ್ಟಿಯಲ್ಲಿ ಲೋಕಸಭಾ ಚುನಾವಣೆ ಅಬ್ಯರ್ಥಿ ನಳಿನ್ ಕುಮಾರ್ ಕಟೀಲ್, ಸಂಜೀವ ಮಠಂದೂರು, ರವಿಶಂಕರ ಮಿಜಾರ್, ವೇದವ್ಯಾಸ ಕಾಮತ್, ಯೋಗೀಶ ಭಟ್ ಮುಂತಾದವರು ಉಪಸ್ಥಿತರಿದ್ದರು.