ಮಂಗಳೂರು, 04 (DaijiworldNews/RA):ವಿದ್ಯಾರ್ಥಿ ವೇತನ ವಿತರಣೆಯಲ್ಲಿ ವಿಳಂಬವಾಗುತ್ತಿದೆ ಎಂದು ಶಾಸಕ ಡಿ.ವೇದವ್ಯಾಸ ಕಾಮತ್ ಅವರು ಆರೋಪಿಸಿದರು.
ಬಿಜೆಪಿ ಪಕ್ಷದ ಕಛೇರಿಯ ಸುದ್ದಿಗೋಷ್ಠಿಯಲ್ಲಿ ಅವರು, ಕಾಂಗ್ರೆಸ್ ವಿರುದ್ಧ ಹಲವು ಆರೋಪಗಳ ಸುರಿಮಳೆಗೈದರು. ಪರಿಶಿಷ್ಟ ಜಾತಿ ಪಂಗಡದ ಹಾಗು ಹಿಂದುಳಿದ ಸಮುದಾಯದ ಮೆಟ್ರಿಕ್ ನಂತರದ ವಿದ್ಯಾರ್ಥಿಗಳು ಈಗಾಗಲೇ ಸ್ಟೇಟ್ ಸ್ಕಾಲರ್ ಶಿರ್ಪ್ ಫೋರ್ಟ್ ಲ್ ನಲ್ಲಿ ಹಿಂದಿನಂತೆ ಅರ್ಜಿ ಸಲ್ಲಿಸಿದ್ದು , ಇನ್ನೂ ಕೂಡ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಪಾವತಿ ಆಗಿಲ್ಲ ಎಂದು ವಿಷಾದ ವ್ಯಕ್ತಪಡಿಸಿದರು.
ಈ ಬಗ್ಗೆ ಹಲವಾರು ವಿದ್ಯಾರ್ಥಿಗಳು ಬಂದು ನನ್ನ ಬಳಿ ದೂರು ಕೊಟ್ಟಿದ್ದಾರೆ. ದಯವಿಟ್ಟು ವಿದ್ಯಾರ್ಥಿಗಳ ಜೀವನದ ಜೊತೆ ಚೆಲ್ಲಾಟವಾಡ ಬೇಡಿ ಎಂದು ಮನವಿ ಮಾಡಿದರು.