ಕಾರವಾರ, ನ 04 (DaijiworldNews/RA) :ರಾಜ್ಯ ರಾಜಕೀಯದಲ್ಲಿ ಮುಂದಿನ ಸಿಎಂ ಯಾರು ಅನ್ನುವ ವಿಚಾರ ಬಗ್ಗೆ ಕೈ ನಾಯಕರ ಒಳಗಡೆ ಬಿಸಿ ಬಿಸಿ ಚರ್ಚೆ ಶುರುವಾಗಿದೆ.
ವಿಧಾನ ಸಭಾ ಚುನಾವಣೆಯ ವೇಳೆ ಎರಡೂವರೆ ತಿಂಗಳು ಸಿದ್ಧರಾಮಯ್ಯ ಮತ್ತು ಮತ್ತೆ ಎರಡೂವರೆ ತಿಂಗಳು ಡಿ.ಕೆ ಶಿವಕುಮಾರ್ ಅಧಿಕಾರದ ಸಿಎಂ ಆಗಿ ಅಧಿಕಾರ ಚುಕ್ಕಾಣೆಯನ್ನು ಹಿಡಿದು ಆಡಳಿತ ನಡೆಸುತ್ತಾರೆ ಅನ್ನುವ ಮಾತು ಕೇಳಿ ಬಂದಿತ್ತು.
ಈ ಮಧ್ಯೆ ಈ ವಿಚಾರಕ್ಕೆ ಸಂಬಂಧಪಟ್ಟಂತೆ ಮೀನುಗಾರಿಕಾ ಸಚಿವ ಮಂಕಾಳು ವೈದ್ಯ ಮಾಧ್ಯಮಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಮ್ಮ ನಾಯಕರು. ಮುಂದೆ ಮುಖ್ಯಮಂತ್ರಿ ಯಾರಾಗುತ್ತಾರೆ ಎನ್ನುವುದನ್ನು ಹೈಕಮಾಂಡ್ ನಿರ್ಧರಿಸಲಿದೆ ಎಂದರು.
ರಾಜ್ಯದ ಜನ ಕಾಂಗ್ರೆಸ್ ಪಕ್ಷಕ್ಕೆ 136 ಸ್ಥಾನ ಗೆಲ್ಲಿಸಿ ಕೊಟ್ಟಿದ್ದಾರೆ. ಐದು ವರ್ಷ ಅಧಿಕಾರ ನಡೆಸಲು ಅವಕಾಶ ಕೊಟ್ಟಿದ್ದಾರೆ. ಯಾರನ್ನ ಸಿಎಂ ಮಾಡಬೇಕು,ಎಷ್ಟು ವರ್ಷ ಮಾಡಬೇಕು ಎಂದು ಹೈಕಮಾಂಡ್ ನಿರ್ಧರಿಸಲಿದೆ ಎಂದರು.