ಕಾಸರಗೋಡು, ನ 09 (DaijiworldNews/MS): ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ಗುರುವಾರ ಮಂಗಲ್ಪಾಡಿಯಲ್ಲಿರುವ ಮಂಜೇಶ್ವರ ತಾಲೂಕು ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇದೇ ವೇಳೆ ಮಂಗಲ್ಪಾಡಿ ಆಸ್ಪತ್ರೆಯಲ್ಲಿ ರಾತ್ರಿ ವೇಳೆಯಲ್ಲೂ ಚಿಕಿತ್ಸಾ ವ್ಯವಸ್ಥೆ ಕೈಗೊಳ್ಳುವುದಾಗಿ ತಿಳಿಸಿದ್ದು, 10ನದೊಳಗೆ ಇದಕ್ಕೆ ಪರಿಹಾರ ಸಿಗಲಿದೆ ಎಂದು ತಿಳಿಸಿದರು.
ಆಸ್ಪತ್ರೆ ಸಿಬ್ಬಂದಿಗಳು ಹಾಗೂ ರೋಗಿಗಳಿಂದ ಮಾಹಿತಿ ಪಡೆದು, ಸೌಕರ್ಯಗಳ ಹೆಚ್ಚಳಕ್ಕೆ ಆದ್ಯತೆ ನೀಡಿದರು. ಶಾಸಕ ಎ.ಕೆ.ಎಂ ಆಶ್ರಫ್ , ಜಿಲ್ಲಾ ವೈದ್ಯಾಧಿಕಾರಿ ಡಾ . ಎ ರಾಮದಾಸ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು. ಜಿಲ್ಲೆಯ ಏಳರಷ್ಟು ಸರಕಾರಿ ಆಸ್ಪತ್ರೆಗಳಿಗೆ ಸಚಿವೆ ಭೇಟಿ ನೀಡಿದರು.
ಇದೇ ವೇಳೇ ಕಾಸರಗೋಡು ಮೆಡಿಕಲ್ ಕಾಲೇಜಿಗೆ ಶಂಕುಸ್ಥಾಪನೆ ಮಾಡಿ 11 ವರ್ಷ ಕಳೆದರೂ ಆರಂಭವಾಗದಿರುವ ಬಗ್ಗೆ ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದರು.