ಮಂಗಳೂರು ನ 12 (DaijiworldNews/RA): ಮಾದಕ ವಸ್ತು ಸೇವಿಸಿ ತೂರಾಡುತ್ತಿದ್ದ ಆರೋಪದ ಮೇರೆಗೆ ಯುವಕನೊರ್ವನನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.
ಸುರತ್ಕಲ್ ಕೃಷ್ಣಾಪುರ ಕೋರ್ದಬ್ಬು ದೈವಸ್ಥಾನದ ಬಳಿಯ ನಿವಾಸಿ ತಿಲಕ್ ರಾಜ್ (28) ಎಂಬಾತ ಬಂಧಿತ ಆರೋಪಿಯಾಗಿದ್ದಾನೆ.
ಈತ ನಗರದ ಉರ್ವ ಮಾರ್ಕೆಟ್ ಬಳಿ ಮಾದಕ ವಸ್ತು ಸೇವಿಸಿ ತೂರಾಡುತ್ತಿದ್ದ ಎಂದು ತಿಳಿದು ಬಂದಿದೆ. ಈ ಬಗ್ಗೆ ಮಾಹಿತಿ ತಿಳಿದು ಸ್ಥಳಕ್ಕೆ ಧಾವಿಸಿದ ಪೊಲೀಸರು ಯುವಕನನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಮಾದಕ ವಸ್ತು ಸೇವನೆ ಮಾಡಿರುವುದು ದೃಢಪಟ್ಟಿದೆ.ಆರೋಪಿ ವಿರುದ್ಧ ನಗರದ ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,ತನಿಖೆ ಮುಂದುವರೆದಿದೆ.