ಮಂಗಳೂರು, ನ.13 (DaijiworldNews/SK): ಎಂಬಿಬಿಎಸ್ ವಿದ್ಯಾರ್ಥಿನಿಯೊಬ್ಬರು ಹಾಸ್ಟೆಲ್ ನ ಆರನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರಿನಲ್ಲಿ ನಡೆದಿದೆ.
ಪ್ರಕೃತಿ ಶೆಟ್ಟಿ (20 ವರ್ಷ) ಆತ್ಮಹತ್ಯೆ ಮಾಡಿಕೊಂಡ ಎಂಬಿಬಿಎಸ್ ವಿದ್ಯಾರ್ಥಿನಿ.
ಮಹಿಳಾ ಹಾಸ್ಟೆಲ್ ನ ಆರನೇ ಮಹಡಿಯಿಂದ ಜಿಗಿದು ಪ್ರಕೃತಿ ಶೆಟ್ಟಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಜೀವನದಲ್ಲಿ ಹತಾಶೆ ಉಂಟಾಗಿರುವುದರಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಡೆತ್ನೋಟ್ನಲ್ಲಿ ಉಲ್ಲೇಖಿಸಿದ್ದಾರೆ.
ಈ ಕುರಿತು ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಯಾವುದೇ ಸಮಸ್ಯೆಗೆ ಆತ್ಮಹತ್ಯೆ ಪರಿಹಾರವಲ್ಲ. ನೀವು ಯಾವುದೇ ತೊಂದರೆಯಲ್ಲಿದ್ದರೆ ದಯವಿಟ್ಟು ಮಾನಸಿಕ ಆರೋಗ್ಯ ತಜ್ಞರ ಸಹಾಯ ಪಡೆಯಿರಿ. ಸಹಾಯವಾಣಿ ಸಂಖ್ಯೆ - 9152987821