ಉಡುಪಿ, ನ 17 (DaijiworldNews/AK): ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೃತ್ಯ ನಡೆದ ಮನೆಗೆ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೇಟಿ ನೀಡಿ ನೂರ್ ಮೊಹಮ್ಮದ್ ಕುಟುಂಬಕ್ಕೆ ಸಾಂತ್ವಾನ ಹೇಳಿದರು.
ಈ ವೇಳೆ ಸ್ಥಳೀಯ ಕಾಂಗ್ರೆಸ್ ನಾಯಕರು ಸಚಿವೆಗೆ ಸಾಥ್ ನೀಡಿದರು. ಬಳಿಕ ಕೃತ್ಯದ ಕುರಿತು ಮಾತನಾಡಿದ ಲಕ್ಷ್ಮಿ ಹೆಬ್ಬಾಳ್ಕರ್ , ಈ ಕೃತ್ಯ ಬೆಚ್ಚಿ ಬೀಳುವ ಘಟನೆ ಆಗಿದೆ .ಕುಟುಂಬದ ನಾಲ್ಕು ಸದಸ್ಯರನ್ನು ಅಮಾನುಷವಾಗಿ ಕೊಂದು ರಾಕ್ಷಸ ಕೃತ್ಯ ಎಸಗಿದ್ದಾನೆ.ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ್ದೇನೆ ಎಂದರು ಹೇಳಿದರು.
ಪೊಲೀಸ್ ಇಲಾಖೆ ಒಳ್ಳೆಯ ಕೆಲಸ ಮಾಡಿದೆ.ಆದಷ್ಟು ಬೇಗ ನ್ಯಾಯ ದೊರಕಿಸಲು ಪ್ರಯತ್ನ ಪಡುತ್ತೇವೆ. ಉಡುಪಿ ಜಿಲ್ಲೆ ಶಾಂತಿ ಪ್ರಿಯ ಜಿಲ್ಲೆ, ಇಂತಹ ಜಿಲ್ಲೆಯಲ್ಲಿ ಹೀಗಬಾರದಿತ್ತು.ಮುಂಜಾಗ್ರತಾ ಕ್ರಮ ಕೈಗೊಳ್ಖುತ್ತೇನೆ, ಕಾನೂನು ಸುವ್ಯವಸ್ಥಿತೆ ಕಾಪಾಡುತ್ತೇವೆ ಎಂದರು.
ಖಂಡಿತ ಯಾರಿಗೂ ಬೆಳಗಾವಿ ಇದ್ದ ಮಾಹಿತಿ ಇರಲಿಲ್ಲಮನುಷ್ಯ ಸೈಕೋ ರೀತಿಯಲ್ಲಿ ವರ್ತಿಸಿದ್ದಾನೆ. ಮೊದಲು ಮದುವೆ ಆಗಿದ್ದಾನೆ.20 ನಿಮಿಷದಲ್ಲಿ ಕೃತ್ಯ ಮೆಂಟಲ್ ಸ್ಟೆಟಸ್ ಯಾವ ರೀತಿ ಇರಬಹುದು.ಫಾಸ್ಟ್ ಟ್ರಾಕ್ ನ್ಯಾಯಾಲಯದ ಮೂಲಕ ತನಿಖೆಗೆ ಒತ್ತಾಯಿಸಿದ್ದಾರೆ.ಮನೆಯವರು ಒಬ್ಬರ ಹೆಸರು ಕೊಟ್ಟಿದ್ದಾರೆ ಅವರ ಮೂಲಕ ತನಿಖೆ ಮಾಡುತ್ತೇವೆ ಎಂದು ಭರವಸೆ ನೀಡಿದರು.
ಬೆಳಗಾವಿಯಲ್ಲಿ ಇದ್ದ ಕಾರಣ ಬರುದಕ್ಕೆ ಲೇಟ್ ಆಯ್ತು.ಅಲ್ಲಿಂದಲೇ ನಾನು ಕುಟುಂಬದ ಹಾಗೂ ಪೊಲೀಸ್ ಇಲಾಖೆಯೊಂದಿಗೆ ಸಂಪರ್ಕದಲ್ಲಿಇದ್ದೆ ಎಂದು ತಿಳಿಸಿದರು.
ಕುಟುಂಬದ ಯಜಮಾನ ನೂರ್ ಮೊಹಮ್ಮದ್ ಮಾತನಾಡಿ, ಉಸ್ತುವಾರಿ ಸಚಿವರು ಮನವಿ ಸ್ವೀಕಾರ ಮಾಡಿದ್ದಾರೆ.ಬೇಗ ನ್ಯಾಯ ಕೊಡಿಸುವ ವಿಶ್ವಾಸ ಕೊಟ್ಟಿದ್ದಾರೆ.ತ್ವರಿತ ನ್ಯಾಯಾಲಯದಲ್ಲಿ ವಿಚಾರಣೆ ನಡೆಸಲು ಒತ್ತಾಯಿಸಿದ್ದೇವೆ. ಅಡ್ವಕೇಟ್ ಶಿವಪ್ರಸಾದ್ ಆಳ್ವ ಅವರನ್ನು ನೇಮಕ ಮಾಡಲು ಒತ್ತಾಯಿಸಿದ್ದೇವೆ.ಎಲ್ಲ ರೀತಿಯಲ್ಲಿ ಸಹಕಾರ ಕೊಡುವ ಆಶ್ವಾಸನೆಯನ್ನು ನೀಡಿದ್ದಾರೆ ಎಂದು ಹೇಳಿದರು.