ಮಂಗಳೂರು, ನ 17 (DaijiworldNews/RA): ಟೆಲಿಗ್ರಾಂ ಆ್ಯಪ್ನಲ್ಲಿ ಪಾರ್ಟ್ಟೈಮ್ ಕೆಲಸದ ಹೆಸರಿನಲ್ಲಿ ವ್ಯಕ್ತಿಯೊಬ್ಬರು ಮೋಸ ಹೋದ ಘಟನೆ ನಡೆದಿದೆ. ಈ ಬಗ್ಗೆ ಮಂಗಳೂರಿನ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ಟಾಸ್ಕ್ ನೀಡಿ 5.85 ಲಕ್ಷ ರೂ.ಗಳನ್ನು ವರ್ಗಾಯಿಸಿಕೊಂಡು ವಂಚನೆ ಮಾಡಲಾಗಿದೆ ಎಂದು ದೂರುದಾರರು ಆರೋಪಿಸಿದ್ದಾರೆ.ಅ. 30ರಂದು ವಾಟ್ಸ್ಅಪ್ ನಂಬರ್ಗೆ ಬಂದ ಮೆಸೇಜ್ನಲ್ಲಿ ಟಾಸ್ಕ್ ಕಂಪ್ಲೀಟ್ ಮಾಡಿ ಹಣ ಗಳಿಸಬಹುದು ಎಂದು ತಿಳಿಸಲಾಗಿತ್ತು.
ಇದನ್ನು ನಂಬಿದ ವ್ಯಕ್ತಿ ಹಣ ಪಾವತಿಸಿ ಟಾಸ್ಕ್ ಪೂರ್ಣಗೊಳಿಸಿದ್ದರು. ಬಳಿಕ ಅವರಿಂದ ಅಕ್ಟೋಬರ್ 30 ರಿಂದ ನ.13 ರವರೆಗೆ ಹಂತ ಹಂತವಾಗಿ ಒಟ್ಟು 5.85 ಲಕ್ಷ ರೂ.ಗಳನ್ನು ಪಡೆದುಕೊಂಡಿದ್ದು ಹಣ ಮರಳಿಸದೆ ವಂಚಿಸಲಾಗಿದೆ ಎಂದು ದೂರು ದಾಖಲಾಗಿದೆ.ಈ ಬಗ್ಗೆ ದೂರು ದಾಖಲಸಿಕೊಂಡಿರವ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.