ಬಂಟ್ವಾಳ,ನ 18 (DaijiworldNews/RA): ಮೂರು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಟ್ವಾಳ ಪೋಲಿಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಪಟ್ಟಂತೆ ಪುದು ನಿವಾಸಿ ಮಹಮ್ಮದ್ ಜಯ್ನುದ್ದೀನ್ ಬಂಧಿತ ಆರೋಪಿಯಾಗಿದ್ದಾನೆ. ಈತನ ಮೇಲೆ 2021 ರ ಡಿ. 21 ರಂದು ಸಾರ್ವಜನಿಕ ಸ್ಥಳದಲ್ಲಿ ಶಾಂತಿ ಭಂಗ ಉಂಟು ಮಾಡುತ್ತಿದ್ದ ಕಾರಣಕ್ಕೆ ಪ್ರಕರಣ ದಾಖಲಾಗಿತ್ತು.
ಬಂಟ್ವಾಳ ಗ್ರಾಮಾಂತರ ಪೊಲೀಸ್ ಇನ್ಸ್ ಪೆಕ್ಟರ್ ಶಿವಕುಮಾರ್ ಹಾಗೂ ಉಪನಿರೀಕ್ಷರುಗಳಾದ ಹರೀಶ್ ಮತ್ತು ಮೂರ್ತಿ ಅವರ ಮಾರ್ಗದರ್ಶನದಲ್ಲಿ ಸಿಬ್ಬಂದಿಗಳಾದ ರಾಧಕೃಷ್ಣ ,ಪುನೀತ್ ಮತ್ತು ನಾಗನಾಥ್ ಅವರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಈ ಕುರಿತು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,ತನಿಖೆ ಮುಂದುವರೆದಿದೆ.