ಮಂಗಳೂರು, ನ 21 (DaijiworldNews/RA): ಭಾರತ ತಂಡವನ್ನು ಸೋಲಿಸಿ ಸತತ ಆರನೇ ಬಾರಿಗೆ ವಿಶ್ವಕಪ್ ಗೆದ್ದ ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ಮ್ಯಾನೆಜರ್ ಕರಾವಳಿ ಮೂಲದ ಯುವತಿ (34) ವರ್ಷದ ಊರ್ಮಿಳಾ ರೊಸಾರಿಯೊ.
ಮಂಗಳೂರು ಸಮೀಪದ ಕಿನ್ನಿಗೋಳಿ ಮೂಲದ ಐವಿ ಮತ್ತು ವ್ಯಾಲೆಂಟೈನ್ ರೊಸಾರಿಯೋ ದಂಪತಿಯ ಪುತ್ರಿಯಾಗಿರುವ ಊರ್ಮಿಳಾ ರೊಸಾರಿಯೊ ಕಳೆದ ಏಳು ವರ್ಷಗಳ ಹಿಂದೆ ಇವರ ತಂದೆ ತಾಯಿ ಭಾರತಕ್ಕೆ ಮರಳಿ ಸಕಲೇಶಪುರದಲ್ಲಿ ನೆಲೆಸಿದ್ದಾರೆ.
ಇನ್ನು ಇವರು ಕಾರ್ನೆಗೀ ಮೆಲನ್ ವಿಶ್ವವಿದ್ಯಾನಿಲಯದಿಂದ ಬಿಬಿಎ ಪದವಿಯನ್ನು ಪಡೆದುಕೊಂಡಿದ್ದಾರೆ. ತನ್ನ ಬಾಲ್ಯದಿಂದಲೂ ಕ್ರೀಡಾ ಪಟುವಾಗಿದ್ದ ಊರ್ಮಿಳಾ ಕತಾರ್ ಟೆನಿಸ್ ಫೆಡರೇಶನ್ನೊಂದಿಗೆ ಮೂರು ವರ್ಷಗಳ ಕಾಲ ಕೆಲಸ ಮಾಡಿದ್ದರು.
ಬಳಿಕ ಆಸ್ಟ್ರೇಲಿಯಾದಲ್ಲಿ ಅವರು ಮೊದಲು ಅಡಿಲೇಡ್ ಕ್ರಿಕೆಟ್ ತಂಡದೊಂದಿಗೆ ಸುಮಾರು ಮೂರು ವರ್ಷಗಳ ಕಾಲ ಕೆಲಸ ಮಾಡಿ ನಂತರ, ಅವರು ತಂಡದ ಮ್ಯಾನೇಜರ್ ಆಗಿ ಆಸ್ಟ್ರೇಲಿಯಾದ ಮಹಿಳಾ ಕ್ರಿಕೆಟ್ ತಂಡಕ್ಕೆ ಆಯ್ಕೆಯಾದರು.
ಕಳೆದ ಫುಟ್ಬಾಲ್ ವಿಶ್ವಕಪ್ ಸಮಯದಲ್ಲಿ ಕ್ರಿಕೆಟ್ ನಿಂದ ರಜೆ ಪಡೆದು ನಾಲ್ಕು ತಿಂಗಳ ಕಾಲ ಕತಾರ್ನಲ್ಲಿ ಫುಟ್ಬಾಲ್ ಕ್ರೀಡಾಂಗಣವನ್ನು ನಿರ್ವಹಿಸಿದರು.ಈ ವರ್ಷದ ಸೆಪ್ಟೆಂಬರ್ ನಲ್ಲಿ ಕತಾರ್ನಿಂದ ಆಸ್ಟ್ರೇಲಿಯಾಕ್ಕೆ ಹಿಂದಿರುಗಿದ ನಂತರ, ವಿಶ್ವಕ್ಕಾಗಿ ಆಸ್ಟ್ರೇಲಿಯಾದ ಪುರುಷರ ಕ್ರಿಕೆಟ್ ತಂಡದ ಹೊಣೆಯನ್ನು ಅವರಿಗೆ ನೀಡಲಾಗಿತ್ತು.
ಇನ್ನು ಈಕೆಯ ತಾಯಿ ಮಾಧ್ಯಮಗಳಿಗೆ ಈ ಕುರಿತು ಪ್ರತಿಕ್ರಿಯೆ ನೀಡಿದ್ದು ಭಾಷೆಗಳ ಬಗ್ಗೆ ಅವರ ಜ್ಞಾನದ ಕಾರಣದಿಂದ ಆಸ್ಟ್ರೇಲಿಯಾ ತಂಡಕ್ಕೆ ಆಯ್ಕೆ ಮಾಡಿರಬಹುದು. ಊರ್ಮಿಳಾ ರೊಸಾರಿಯೊ ಹಿಂದಿ, ಕನ್ನಡ ಮತ್ತು ಕೊಂಕಣಿಯನ್ನು ಚೆನ್ನಾಗಿ ಮಾತನಾಡುತ್ತಾರಂತೆ ಇದು ಕೂಡ ಇವರ ಸಾಧನೆಗೆ ಪ್ಲಸ್ ಆಗಿರಬಹುದು. ಏನೇ ಆಗಲಿ ಕರಾವಳಿ ಮೂಲದ ವ್ಯಕ್ತಿಯೊಬ್ಬರು ಆಸ್ಟ್ರೇಲಿಯಾ ವಿಶ್ವಕಪ್ ಕ್ರಿಕಟ್ ನ ಸಾರರ್ಥ್ಯ ವಹಿಸಿ ಅದರ ಗೆಲುವಿಗೆ ಕಾರಣರಾಗಿರುವುದು ಕರಾವಳಿಗರು ಬಹಳ ಹೆಮ್ಮೆ ಪಡುವಂತಹ ವಿಚಾರವೇ ಸರಿ.