ಉಡುಪಿ, ನ 23 (DaijiworldNews/HR): ಬ್ರಹ್ಮಾವರ ಸಕ್ಕರೆ ಕಾರ್ಖಾನೆಯ ತ್ಯಾಜ್ಯ ವಸ್ತುಗಳ ಮಾರಾಟದಲ್ಲಿ ಕೋಟ್ಯಂತರ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿ ಸಕ್ಕರೆ ಕಾರ್ಖಾನೆ ಅಧ್ಯಕ್ಷ ಹಾಗೂ ನಿರ್ದೇಶಕರ ವಿರುದ್ಧ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ಖಾನೆಯ ಅಧ್ಯಕ್ಷರ ಜಾಮೀನು ಅರ್ಜಿಯನ್ನು ಉಡುಪಿ ಜಿಲ್ಲಾ ನ್ಯಾಯಾಲಯ ತಿರಸ್ಕರಿಸಿದೆ.
ಬ್ರಹ್ಮಾವರ ಸಕ್ಕರೆ ಕಾರ್ಖಾನೆಯ ಅಧ್ಯಕ್ಷ ಬೈಕಾಡಿ ಸುಪ್ರಸಾದ್ ಶೆಟ್ಟಿ ಮತ್ತು ಇತರ ನಿರ್ದೇಶಕರು ಭ್ರಷ್ಟಾಚಾರದ ಆರೋಪ ಎದುರಿಸುತ್ತಿದ್ದಾರೆ ಎಂದು ಉಡುಪಿ ರೈತ ಸಂಘ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದೆ.
ಆರೋಪಿಗಳ ಜಾಮೀನು ಅರ್ಜಿಯನ್ನು ಉಡುಪಿ ನ್ಯಾಯಾಲಯವು ನ.23 ಗುರುವಾರ ತಿರಸ್ಕರಿಸಿದೆ ಎಂದು ಪಬ್ಲಿಕ್ ಪ್ರಾಸಿಕ್ಯೂಟರ್ ಜಯರಾಮ ಶೆಟ್ಟಿ ತಿಳಿಸಿದ್ದಾರೆ.