ಕುಂದಾಪುರ, ಏ17(Daijiworld News/AZM): ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಹಿನ್ನಲೆ ಕೆರ್ಗಾಲ್ ಗ್ರಾಮ ಪಂಚಾಯತ್ ಸದಸ್ಯನನ್ನು ಪೊಲೀಸರು ಇಂದು ಬಂಧಿಸಿದ್ದಾರೆ.
ಕೆರ್ಗಾಲ್ ಗ್ರಾಪಂ ಸದಸ್ಯ ರಮೇಶ್ ಗಾಣಿಗ ಮೊಗೇರಿ (38) ಬಂಧಿತ ಆರೋಪಿ.ಈತ ಎ.16ರಂದು 14ರ ಹರೆಯದ ಬಾಲಕನನ್ನು ನಿರ್ಮಾಣ ಹಂತದ ಮನೆಯೊಂದಕ್ಕೆ ಕರೆದೊಯ್ದು ಆತನಿಗೆ ಲೈಂಗಿಕ ಕಿರುಕುಳ ನೀಡಿದ ಎನ್ನಲಾಗಿದೆ. ಈ ವೇಳೆ ಬಾಲಕ ಅಲ್ಲಿಂದ ತಪ್ಪಿಸಿಕೊಂಡು ಮನೆ ಸೇರಿದ್ದ ಎಂದು ತಿಳಿದು ಬಂದಿದೆ. ಈ ಬಗ್ಗೆ ಬಾಲಕನ ಪೋಷಕರು ನೀಡಿದ ದೂರಿನಂತೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ಕುರಿತು ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.