ಪುತ್ತೂರು, ಡಿ 04 (DaijiworldNews/MS): ಅರಿಯಡ್ಕ ಗ್ರಾಮ ಪಂಚಾಯತ್ ಸದಸ್ಯರೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ.
ಮಾಡನ್ನೂರು ಗ್ರಾಮದ ಕಾವು ಬಂಗ್ಲೆ ಗುಡ್ಡೆ ನಿವಾಸಿ, ಅರಿಯಡ್ಕ ಗ್ರಾಮ ಪಂಚಾಯತಿನ ಕಾಂಗ್ರೆಸ್ ಬೆಂಬಲಿತ ಸದಸ್ಯ ಶಂಕರ ಮಾಡನ್ನೂರು ಆತ್ಮಹತ್ಯೆ ಗೆ ಶರಣಾದವರು.
ಶಂಕರ್ 5 ವರ್ಷಗಳ ಹಿಂದೆ ಸಾಲ ಮಾಡಿ ಜಾಗ ಖರೀದಿ ಮಾಡಿದ್ದು, ಸಾಲ ಮರುಪಾವತಿ ಚಿಂತೆಯಲ್ಲಿದ್ದ ಅವರು ಜೀವನದಲ್ಲಿ ಜಿಗುಪ್ಸೆ ಹೊಂದಿದ್ದರು ಎನ್ನಲಾಗಿದೆ.
ಡಿ.3ರಂದು ಮನೆಯವರು ಮಲಗಿದ್ದಾಗ ಮನೆಯ ಒಳಗಡೆಯೇ ಆತ್ಮಹತ್ಯೆ ಮಾಡಿಕೊಂಡಿದ್ದು, ಮರುದಿನ ಬೆಳಿಗ್ಗೆ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.
ಪತ್ನಿ ವನಿತಾ ನೀಡಿದ ದೂರಿನಂತೆ ಸಂಪ್ಯ ಠಾಣೆಯಲ್ಲಿ ಪ್ರ ಕರಣ ದಾಖಲಾಗಿದೆ.
ಯಾವುದೇ ಸಮಸ್ಯೆಗೆ ಆತ್ಮಹತ್ಯೆ ಪರಿಹಾರವಲ್ಲ. ನೀವು ಯಾವುದೇ ತೊಂದರೆಯಲ್ಲಿದ್ದರೆ ದಯವಿಟ್ಟು ಮಾನಸಿಕ ಆರೋಗ್ಯ ತಜ್ಞರ ಸಹಾಯ ಪಡೆಯಿರಿ. ಸಹಾಯವಾಣಿ ಸಂಖ್ಯೆ – 9152987821