ವಿಟ್ಲ, ಡಿ 06 (DaijiworldNews/AK): ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಅಡಿಕೆ ಮರ ಮುರಿದು ಬಿದ್ದು ಮಹಿಳೆಯೋರ್ವರು ಸಾವನ್ನಪ್ಪಿದ ಘಟನೆ ಸಾಲೆತ್ತೂರಿನಲ್ಲಿ ನಡೆದಿದೆ.
ಗುಲಾಬಿ(48) ಮೃತ ದುರ್ದೈವಿ. ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಅಡಿಕೆ ಮರವೊಂದು ಆಕಸ್ಮಿಕವಾಗಿ ಮುರಿದು ಬಿದ್ದು ತಲೆಗೆ ತೀವ್ರ ಪೆಟ್ಟಾಗಿದ್ದು ಈ ಹಿನ್ನಲೆ ಕೂಡಲೇ ಮಹಿಳೆಯನ್ನು ವಿಟ್ಲ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.