ಬಂಟ್ವಾಳ,ಡಿ 07 (DaijiworldNews/PC): ಪಾಣೆಮಂಗಳೂರು ಸಮೀಪದ ಅಕ್ಕರಂಗಡಿ ಮಸೀದಿ ಮುಂಭಾಗದಲ್ಲಿ ನಿರ್ಮಾಣವಾಗುತ್ತಿರುವ ಬಂಟ್ವಾಳ ಸಂಚಾರ ಠಾಣೆಯ ಕಾಮಗಾರಿಯನ್ನು ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್ ವೀಕ್ಷಣೆ ನಡೆಸಿದರು.
ಅಕ್ಕರಂಗಡಿಯಲ್ಲಿ ಸುಮಾರು 75 ಸೆಂಟ್ಸ್ ಜಾಗದಲ್ಲಿ 2.44 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಕಾಮಗಾರಿಯನ್ನು ವೀಕ್ಷಿಸಿದ ಅವರು ಠಾಣೆಯ ಹೊರ ಹಾಗೂ ಒಳವಿನ್ಯಾಸಗಳ ಬಗ್ಗೆ ಚರ್ಚಿಸಿ, ಕೆಲವು ಮಾರ್ಪಡುಗಳನ್ನು ಮಾಡುವಂತೆ ಇಂಜಿನಿಯರ್ ಹಾಗೂ ಗುತ್ತಿಗೆದಾರರಿಗೆ ಅವರಿಗೆ ತಿಳಿಸಿದರು.
ಸುತ್ತಮುತ್ತಲಿನ ತಗ್ಗು ಪ್ರದೇಶಗಳನ್ನು ಮಣ್ಣು ತುಂಬಿಸಿ ಸಮತಟ್ಟುಗೊಳಿಸಬೇಕು.ಮತ್ತು ಠಾಣಾಯ ಸುತ್ತಮುತ್ತಲು ಸುಂದರವಾಗಿ ಕಾಂಪೌಂಡ್ ನಿರ್ಮಾಣ ಮಾಡಬೇಕು ಎಂದು ತಿಳಿಸಿದರು.
ಠಾಣೆಯ ನಿರ್ಮಾಣದ ಗುಣಮಟ್ಟದಲ್ಲಿ ಯಾವುದೇ ಕಳಪೆಯಾಗಬಾರದು. ಉತ್ತಮ ರೀತಿಯಲ್ಲಿ ಸುಸಜ್ಜಿತ ಕಟ್ಟಡ ನಿರ್ಮಾಣವಾಗಬೇಕು ಎಂದು ಗುತ್ತಿಗೆದಾರರಿಗೆ ಖಡಕ್ ವಾರ್ನಿಂಗ್ ನೀಡಿದ್ದಾರೆ.