ಮಂಗಳೂರು, ಡಿ 11(DaijiworldNews/SK): ಡಿಸೆಂಬರ್ 11ರಿಂದ 16ರವರೆಗೆ ಪ್ರಥಮ ಮತ್ತು ದ್ವಿತೀಯ ಡಿಎಲ್ ಇಡಿ ಪೂರಕ ಪರೀಕ್ಷೆಗಳು ನಡೆಯಲಿರುವುದರಿಂದ ಪರೀಕ್ಷಾ ಕೇಂದ್ರದ ಸುತ್ತಮುತ್ತಲಿನ 200 ಮೀಟರ್ ವ್ಯಾಪ್ತಿಯ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಪರೀಕ್ಷೆ ನಡೆಯುವ ಸಂದರ್ಭದಲ್ಲಿ ಯಾವುದೇ ರೀತಿಯ ಕಾನೂನುಬಾಹಿರ ಚಟುವಟಿಕೆಗಳು, ಅಹಿತಕರ ಘಟನೆಗಳು ನಡೆಯದಂತೆ ಪರೀಕ್ಷೆಗಳನ್ನು ಶಾಂತ ವಾತಾವರಣದಲ್ಲಿ ನಡೆಸಲು ಅನುಕೂಲವಾಗುವಂತೆ ಪರೀಕ್ಷಾ ಕೇಂದ್ರದ ಸುತ್ತಮುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿ ಮಂಗಳೂರು ನಗರದ ಕಾನೂನು ಮತ್ತು ಸುವ್ಯವಸ್ಥೆ ಹಾಗೂ ವಿಶೇಷ ಕಾರ್ಯ ನಿರ್ವಾಹಕ ದಂಡಾಧಿಕಾರಿಗಳೂ ಆಗಿರುವ ಉಪ ಪೊಲೀಸ್ ಆಯುಕ್ತ ಸಿದ್ದಾರ್ಥ್ ಗೋಯಲ್ ಅವರು ಆದೇಶ ಹೊರಡಿಸಿದ್ದಾರೆ.