ಬೆಳ್ತಂಗಡಿ,ಡಿ12(DaijiworldNews/RA): ಚಿಕ್ಕಮಗಳೂರಿನಿಂದ ಮಂಗಳೂರಿಗೆ ಮರದ ದಿಮ್ಮಿಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಬೆಳ್ತಂಗಡಿಯ ಚಾರ್ಮಾಡಿ ಘಾಟಿಯ ವ್ಯೂ ಪಾಯಿಂಟ್ ಸಮೀಪ ನಡೆದಿದೆ.
ಘಟನೆಯಲ್ಲಿ ಚಾಲಕನ ತಲೆಗೆ ಗಂಭೀರ ಪ್ರಮಾಣದ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.
ಹೆಚ್ಚಿನ ಮಾಹಿತಿಯನ್ನು ನಿರೀಕ್ಷೆ ಮಾಡಲಾಗ್ತ ಇದೆ.