ಮಂಗಳೂರು, ಡಿ13 (DaijiworldNews/MS): ಜಿಲ್ಲೆಯ ವಿವಿದೆಡೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳು ನಿಧಾನಗತಿಯಲ್ಲಿ ಸಾಗುತ್ತಿರುವುದಕ್ಕೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿ, ಬೈಕಂಪಾಡಿ, ಬಿ.ಸಿ. ರೋಡ್, ಮಾಣಿ ಪ್ರದೇಶಗಳಲ್ಲಿ ಹೆದ್ದಾರಿ ಕಾಮಗಾರಿ ಬಹಳ ನಿಧಾನವಾಗಿ ಸಾಗುತ್ತಿದೆ. ಇದರಿಂದ ಈ ಪ್ರದೇಶಗಳಲ್ಲಿ ಪ್ರತಿನಿತ್ಯ ಸುಗಮ ಸಂಚಾರಕ್ಕೂ ತೀವ್ರ ತೊಂದರೆಯಾಗುತ್ತಿದೆ. ತ್ವರಿತಗತಿಯಲ್ಲಿ ಕಾಮಗಾರಿ ನಡೆಸುವಂತೆ ಅವರು ಹೆದ್ದಾರಿ ಇಲಾಖೆ ಅಧಿಕಾರಿಗಳಿಗೆ ತಾಕೀತು ಮಾಡಿದರು.
ಕದ್ರಿ ಪಾರ್ಕ್: ಕದ್ರಿ ಪಾರ್ಕ್ ವೀಕ್ಷಣೆಗೆ ಬಂದ ಸಾರ್ವಜನಿಕರಿಗೆ ಆಹ್ಲಾದಕರ ವಾತಾವರಣ ಇರುವಂತಹ ವಾತಾವರಣ ಇರಬೇಕು. ಕದ್ರಿ ಪಾರ್ಕಿಗೆ ಹಾದು ಹೋಗುವ ರಸ್ತೆ ಮೇಲೆ ಯಾವುದೇ ರೀತಿಯ ಜನದಟ್ಟಣೆ ಆಗದ ಹಾಗೆ ನೋಡಿಕೊಳಬೇಕು. ಫುಟ್ಪಾತ್ಗಳ ಮೇಲೆ ಬೀದಿ ವ್ಯಾಪಾರಿಗಳ ಬಗ್ಗೆ ಮತ್ತು ಪಾಕಿರ್ಂಗ್ ವ್ಯವಸ್ಥೆಗಳ ಬಗ್ಗೆ ಮತ್ತು ಸ್ವಚ್ಛತೆಯ ಬಗ್ಗೆ .ಕಾಳಜಿ ವಹಿಸಬೇಕು ಎಂದು ಜಿಲ್ಲಾಧಿಕಾರಿಗಳು ಸೂಚಿಸಿದರು.
ಕಾವೂರು ಕೆರೆ ಹಾಗೂ ಗುಜ್ಜರೆ ಕೆರೆಗಳನ್ನು ಸ್ವಚ್ಛವಾಗಿ ಇರಿಸಲು ಮತ್ತು ನೀರಿನ ಸೌಕರ್ಯಗಳು ಅಚ್ಚುಕಟ್ಟಾಗಿ ನಿರ್ವಹಿಸಲು ಸಮಿತಿ ರಚಿಸಲು ಸ್ಥಳೀಯ ಶಾಸಕರೊಂದಿಗೆ ಚರ್ಚಿಸಿ, ಪ್ರಸ್ತಾವನೆ ಸಲ್ಲಿಸಲು ಅವರು ತಿಳಿಸಿದರು.
ಕೌಶಲ್ಯ ಅಭಿವೃದ್ಧಿ ಯೋಜನೆಯಡಿ ಮತ್ತು ಸುರಕ್ಷಾ ತರಬೇತಿ ಕೇಂದ್ರದಡಿ ಮೀನುಗಾರಿಕಾ ಕಾಲೇಜಿನಲ್ಲ್ಲಿ ಸ್ಮಾರ್ಟ್ ಸಿಟಿ ಯೋಜನೆ ಅಡಿಯಲ್ಲಿ ರೂ.2.4 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ತರಬೇತಿ ಕೇಂದ್ರದಲ್ಲಿ 2024ರ ಫೆಬ್ರುವರಿಯಲ್ಲಿ ತರಬೇತಿಗಳನ್ನು ಪ್ರಾರಂಭಿಸಲು ಅವರು ಸೂಚಿಸಿದರು. ಸಭೆಯಲ್ಲಿ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.