ಪುತ್ತೂರು, ಡಿ 14 (DaijiworldNews/MS): ಹೈದರಾಬಾದ್ ನಲ್ಲಿ ಕೆಲಸಕ್ಕಿದ್ದ ಯುವಕ ಊರಿಗೆ ಬಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಂಪ್ಯ ಬಳಿ ನಡೆದಿದೆ.
ಮೃತರನ್ನು ಕಲ್ಲರ್ಪೆ ನಿವಾಸಿ ಶ್ರೀಧರ್ ಆಚಾರ್ಯ ಸಂಪ್ಯ ಇವರ ಪುತ್ರ, ಪತ್ರಕರ್ತ ಗಣೇಶ್ ಕಲ್ಲರ್ಪೆ ಅವರ ಸಹೋದರ ಭರತ್ ಕಲ್ಲರ್ಪೆ(24) ಎಂದು ಗುರುತಿಸಲಾಗಿದೆ.
ಮನೆಯ ಸಮೀಪದ ತಮ್ಮ ತೋಟದ ಮರವೊಂದರಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಭರತ್ ಕಲ್ಲರ್ಪೆ ಹೈದರಾಬಾದ್ ನ ಖಾಸಗಿ ಕಂಪೆನಿಯೊಂದರಲ್ಲಿ ಉದ್ಯೋಗದಲ್ಲಿದ್ದು ತಿಂಗಳ ಹಿಂದೆಯಷ್ಟೇ ಊರಿಗೆ ಬಂದಿದ್ದರು. ಅಣ್ಣನ ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸಿ ಮತ್ತೆ ಹೈದರಾಬಾದ್ ಗೆ ತೆರಳಿದ್ದು, ಡಿ.12ರಂದು ಮತ್ತೆ ಮನೆಗೆ ಬಂದಿದ್ದರು. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.
ಯಾವುದೇ ಸಮಸ್ಯೆಗೆ ಆತ್ಮಹತ್ಯೆ ಪರಿಹಾರವಲ್ಲ. ನೀವು ಯಾವುದೇ ತೊಂದರೆಯಲ್ಲಿದ್ದರೆ ದಯವಿಟ್ಟು ಮಾನಸಿಕ ಆರೋಗ್ಯ ತಜ್ಞರ ಸಹಾಯ ಪಡೆಯಿರಿ. ಸಹಾಯವಾಣಿ ಸಂಖ್ಯೆ – 9152987821