ಮಂಗಳೂರು, ಡಿ 21 (DaijiworlsNews/AA): ರಾಜ್ಯಾದ್ಯಂತ ಎಲ್ಲಾ ಜಿಲ್ಲೆಗಳಲ್ಲೂ ಕೊರೊನಾ ಲಕ್ಷಣಗಳಿರುವ ಎಲ್ಲರಿಗೂ ಕೊರೊನಾ ಟೆಸ್ಟಿಂಗ್ ಆರಂಭಿಸಲಾಗಿದೆ. ಅದರಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾ ಟೆಸ್ಟಿಂಗ್ ಆರಂಭಿಸಿದ ಮೊದಲ ದಿನವೇ ಒಂದು ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ.
ಉಡುಪಿ ಮೂಲದ 82 ವರ್ಷದ ವೃದ್ಧರೋರ್ವರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ.
ಮಂಗಳೂರಿನ ಖಾಸಗಿ ಆಸ್ಪತ್ರೆಯೊಂದಕ್ಕೆ ನರ ಸಂಬಂಧಿ ಕಾಯಿಲೆಗೆ ಚಿಕಿತ್ಸೆ ಪಡೆಯಲು ಬಂದಿದ್ದರು. ಈ ವೇಳೆ ಅವರನ್ನು ರಾಟ್ ಟೆಸ್ಟ್ ಮಾಡಿಸಿದಾಗ ಅದರಲ್ಲಿ ಕೊರೊನಾ ಪಾಸಿಟಿವ್ ಪತ್ತೆಯಾಗಿದೆ.
ಇದೀಗ ವೃದ್ಧರಲ್ಲಿ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆ ಖಾಸಗಿ ಆಸ್ಪತ್ರೆಯ ಐಸೋಲೇಷನ್ ವಾರ್ಡ್ ಗೆ ಅವರನ್ನು ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ.