ಡಿ.21(DaijiworlsNews/RA):7ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಂದಾಪುರದ ಕೋಣಿ ಎಂಬಲ್ಲಿ ಡಿ 20ರ ಬುಧವಾರ ಸಂಜೆ ನಡೆದಿದೆ.
ಮೃತ ಬಾಲಕಿಯನ್ನು ಕೋಣಿ ನಿವಾಸಿ ರಾಜಶೇಖರ ಎಂಬವರ ಪುತ್ರಿ ರಿಷಿತಾ (13) ಎಂದು ಗುರುತಿಸಲಾಗಿದೆ.
ರಿಷಿತಾ ನಿನ್ನೆ ಸಂಜೆ ಶಾಲೆ ಮುಗಿಸಿ ಬಂದು ಮನೆ ಬಳಿ ಇದ್ದ ಬೊಬ್ಬರ್ಯ ದೇವಸ್ಥಾನದ ಬಳಿ ತೆರಳಿದ್ದು, ಸ್ವಲ್ಪ ಹೊತ್ತಾದರು ವಾಪಾಸು ಬಾರದೇ ಇದ್ದಾಗ ತಾಯಿ ಹುಡುಕಾಡಿದಾಗ ಮನೆಯ ಬಾವಿ ಬಳಿ ಆಕೆಯ ಮೃತದೇಹ ಪತ್ತೆಯಾಗಿದೆ. ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ರಿಷಿತಾಳಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.
ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,ತನಿಖೆ ಮುಂದುವರೆದಿದೆ.
ಯಾವುದೇ ಸಮಸ್ಯೆಗೆ ಆತ್ಮಹತ್ಯೆ ಪರಿಹಾರವಲ್ಲ. ನೀವು ಯಾವುದೇ ತೊಂದರೆಯಲ್ಲಿದ್ದರೆ ದಯವಿಟ್ಟು ಮಾನಸಿಕ ಆರೋಗ್ಯ ತಜ್ಞರ ಸಹಾಯ ಪಡೆಯಿರಿ. ಸಹಾಯವಾಣಿ ಸಂಖ್ಯೆ – 9152987821