ಮಂಗಳೂರು,ಡಿ 23 (DaijiworldNews/MS): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬ್ಯಾಂಕ್ ಖಾತೆಗಳಿಗೆ ಯಾವುದಾದರೂ ಯೋಜನೆ ಮಾಡದೇ ಇರುವುದು ಮತ್ತು ನಿಷ್ಕ್ರಿಯ ಬ್ಯಾಂಕ್ ಖಾತೆಗಳಿಗೆ ಅದರ ಜೋಡಣೆ ಮಾಡದಿರುವುದು ಮುಂತಾದ ಕಾರಣಗಳಿಂದ ಫಲಾನುಭವಿಗಳು ಗೃಹಲಕ್ಷ್ಮಿ ಯೋಜನೆಯಿಂದ ವಂಚಿತರಾಗಿರುತ್ತಾರೆ.
ಆದ್ದರಿಂದ ಪ್ರತಿ ಗ್ರಾಮ ಪಂಚಾಯತ್ ಕಚೇರಿಯಲ್ಲಿ ಡಿಸೆಂಬರ್ 27ರಿಂದ 29 ರವರೆಗೆ ಪ್ರತಿದಿನ ಬೆಳಿಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಹರಿಸಲು ಶಿಬಿರಗಳಿಗೆ ಭೇಟಿ ನೀಡಿ ಪ್ರಯೋಜನವನ್ನು ಪಡೆದುಕೊಳ್ಳುವಂತೆ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.