ಕುಂದಾಪುರ, ಡಿ 26 (DaijiworldNews/MS): ಪ್ರತಿಯೊಬ್ಬ ಪ್ರಜೆಯೂ ಸ್ವಾಭಿಮಾನ, ಸ್ವಾತಂತ್ರ್ಯದಿಂದ ಬದುಕಬೇಕು ಎನ್ನುವ ಕಲ್ಪನೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ವಿಕಸಿತ ಭಾರತದ ಸಂಕಲ್ಪ ಯಾತ್ರೆಗೆ ಚಾಲನೆ ನೀಡಿದ್ದಾರೆ ಎಂದು ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಕಿರಣ್ ಕುಮಾರ್ ಕೊಡ್ಗಿ ಹೇಳಿದರು.
ಅವರು ಗೋಪಾಡಿ ಗ್ರಾ.ಪಂ. ಆವರಣದಲ್ಲಿ ನಡೆದ 8ನೇಯ ದಿನದ ವಿಕಸಿತ ಭಾರತ ಸಂಕಲ್ಪ ಯಾತ್ರೆಯನ್ನು ಉದ್ಘಾಟಿಸಿ ಮಾತನಾಡಿದರು.
ಮಾಜಿ ಸಚಿವ ಹಾಗೂ ವಿಧಾನ ಪರಿಷತ್ ವಿಪಕ್ಷ ನಾಯಕನಾಗಿ ಆಯ್ಕೆಯಾಗಿರುವ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ನರೆಂದ್ರ ಮೋದಿ ನೇತೃತ್ವದ ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ದೇಶದ ಜನ ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ. ಕಳೆದ 70 ವರ್ಷಗಳಿಮದ ಮಾಡಲಾಗದ ಅಭಿವೃದ್ಧಿ ಕಾರ್ಯವನ್ನು ಮೋದಿಜಿಯವರು ಮಾಡಿರುವುದು ಹೆಮ್ಮೆಯ ಸಂಗತಿ. ಈ ನಿಟ್ಟಿನಲ್ಲಿ ವಿಕಸಿತ ಭಾರತ ಸಂಕಲ್ಪ ಯಾಥ್ರೆ ಮಹತ್ವಪೂರ್ಣವಾಗಿದೆ ಎಂದರು.
ಗೋಪಾಡಿ ಗ್ರಾ.ಪಂ. ಅಧ್ಯಕ್ಷ ಸುರೇಶ್ ಶೆಟ್ಟಿ ಸಂಕಲ್ಪದ ಪ್ರತಿಜ್ಞಾ ವಿಧಿಯನ್ನು ವಾಚಿಸಿದರು, ಲೀಡ್ ಬ್ಯಾಂಕಿನ ಮ್ಯಾನೇಜರ್ ಅವರು ಜನಕಲ್ಯಾಣಕ್ಕಾಗಿ ಬ್ಯಾಂಕ್ ಕಡೆಯಿಂದ ಸಿಗುವ ವಿವಿಧ ಸಬ್ಸಿಡಿ ಸಾಲ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗೋಪಾಡಿ ಗ್ರಾ.ಪಂ.ಅಧ್ಯಕ್ಷ ಸುರೇಶ್ ಶೆಟ್ಟಿ ವಹಿಸಿದ್ದರು. ಕುಂದಾಪುರ ಅಂಚೆ ನಿರೀಕ್ಷಕ ರಾಮಚಂದ್ರ ಡಿ.ಎಮ್.,ಬ್ರಹ್ಮಾವರ ಕೃಷಿ ಕೇಂದ್ರದ ಹಿರಿಯ ವಿಜ್ಞಾನಿಗ ಮತ್ತು ಮುಖ್ಯಸ್ಥ ಡಾ.ಧನಂಜಯ, ಗೋಪಾಡಿ ಯೂನಿಯನ್ ಬ್ಯಾಂಕ್ ಮ್ಯಾನೇಜರ್ ಪ್ರಶಾಂತ್, ಉಡುಪಿ ಜಿಲ್ಲಾಸ್ಪತ್ರೆ ಆರೋಗ್ಯ ಮಿತ್ರ ಸುಜನಮಾಲಾ, ಗೋಪಾಡಿ ಪಂ. ಉಪಾಧ್ಯಕ್ಷೆ, ವಿಕಸಿತ ಭಾರತ ಅಭಿಯಾನದ ರಥದಲ್ಲಿ ನರೇಂದ್ರ ಮೋದಿಜಿ ಅವರ ಜನಪರ ಯೋಜನೆಗಳ ನೇರ ಸಂಭಾಷಣೆಯನ್ನು ವೀಕ್ಷಿಸಿ ತದನಂತರ ಕೃಷಿಗೆ ಸಂಬಂಧಪಟ್ಟ, ಕೀಟನಾಶಕಗಳನ್ನು ಸಿಂಪಡಿಸುವ, ಸಾಮರ್ಥ್ಯದ ಡ್ರೋನ್ ಪ್ರಾತ್ಯಕ್ಷಿಕೆಯನ್ನು ವೀಕ್ಷಿಸಲಾಯಿತು.
ಗೋಪಾಡಿ ಗ್ರಾ.ಪಂ. ಕಾರ್ಯನಿರ್ವಾಹಣಾಧಿಕಾರಿ ಗಣೇಶ್ ಪಿ. ಕಾರ್ಯಕ್ರಮ ನಿರೂಪಿಸಿ, ವಂದಿಸಿದರು. ಉಡುಪಿ ಲೀಡ್ ಬ್ಯಾಂಕ್ ಮ್ಯಾನೇಜರ್ ಪಿಂಜರಾ ಪ್ರಾಸ್ತಾವಿಕ ಮಾತನಾಡಿದರು. ಗೋಪಾಡಿ ಗ್ರಾ.ಪಂ.ಅಧ್ಯಕ್ಷ ಸುರೇಶ್ ಶೆಟ್ಟಿ ಸ್ವಾಗತಿಸಿದರು.