ಮಂಗಳೂರು, ಡಿ 26 (DaijiworldNews/MS): ಕರಾವಳಿ ಜನರ ನಿರೀಕ್ಷೆಯ ಮಂಗಳೂರು - ಮಡ್ಗಾಂವ್ ವಂದೇ ಭಾರತ್ ರೈಲು ಪರೀಕ್ಷಾರ್ಥ ಸಂಚಾರಕ್ಕೆ ಮಂಗಳೂರು ಸೆಂಟ್ರಲ್ ನಿಲ್ದಾಣದಲ್ಲಿ ಚಾಲನೆ ಸಿಕ್ಕಿದ್ದು, ಈ ವೇಳೆ ಸಂಸದ ನಳಿನ್ ಕುಮಾರ್ ಕಟೀಲ್ , ಸ್ಥಳೀಯ ಶಾಸಕರು ಹಾಗೂ ರೈಲ್ವೇ ಅಧಿಕಾರಿಗಳು ಉಪಸ್ಥಿತರಿದ್ದರು.
ಬೆಳಗ್ಗೆ 8:30ಕ್ಕೆ ಮಂಗಳೂರಿನಿಂದ ಹೊರಟ ರೈಲು ಮಧ್ಯಾಹ್ನ 1:15ರ ವೇಳೆಗೆ ಮಡಗಾಂವ್ ತಲುಪುವ ನಿರೀಕ್ಷೆ ಇದೆ. ಮತ್ತೆ ಇಂದು ಮಧ್ಯಾಹ್ನ 1:45ಕ್ಕೆ ಮಡಗಾಂವ್ ನಿಂದ ಹೊರಟು ಸಂಜೆ 6:30ರ ವೇಳೆಗೆ ಮಂಗಳೂರು ತಲುಪಲಿದೆ. ಉಡುಪಿ ಮತ್ತು ಕಾರವಾರದಲ್ಲಿ ನಿಲುಗಡೆ ಇರಲಿದೆ.
ಮಂಗಳೂರು - ಗೋವಾ ನಡುವಿನ ವಂದೇ ಭಾರತ್ ರೈಲಿನ ಸದ್ಯದ ವೇಳಾಪಟ್ಟಿ ಪ್ರಕಾರ, ಮಂಗಳವಾರ ಹೊರತುಪಡಿಸಿ ವಾರದ 6 ದಿನ ಸಂಚಾರ ನಡೆಸಲಿದೆ.