ಮಂಗಳೂರು, ಡಿ 26 (DaijiworldNews/MS): ಮಹಾನಗರಪಾಲಿಕೆಯ ಪಚ್ಚನಾಡಿ ತ್ಯಾಜ್ಯ ಘಟಕದಲ್ಲಿ ಬೆಂಕಿ ಉಂಟಾದ ಘಟನೆಯ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಅವರು ಸೋಮವಾರ ಭೇಟಿ ನೀಡಿ ಪರಿಶೀಲಿಸಿದರು.
ತ್ಯಾಜ್ಯ ಘಟಕದ ವಿವಿಧ ವಿಭಾಗಗಳಿಗೂ ಭೇಟಿ ನೀಡಿ ವೀಕ್ಷಿಸಿದ ಅವರು, ತ್ಯಾಜ್ಯ ನಿರ್ವಹಣೆಯ ಮಾಹಿತಿ ಪಡೆದರು. ಮುಂದಿನ ದಿನಗಳಲ್ಲಿ ಬೆಂಕಿ ಉಂಟಾಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿ ಸೂಚಿಸಿದರು.
ಈ ಸಂದರ್ಭದಲ್ಲಿ ಮಂಗಳೂರು ಮಹಾನಗರಪಾಲಿಕೆ ಆಯುಕ್ತ ಆನಂದ್ ಉಪಸ್ಥಿತರಿದ್ದರು.