ಮಂಗಳೂರು, ಡಿ 27 (DaijiworldNews/MR): ದೀಪಕ್ ರಾವ್ ಮತ್ತು ಪ್ರಶಾಂತ್ ಪೂಜಾರಿ ಹತ್ಯೆ ಪ್ರಕರಣವನ್ನು ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆಗೆ ಒಳಪಡಿಸುವಂತೆ ಪ್ರಶಾಂತ್ ಪೂಜಾರಿ ಯವರ ತಾಯಿ ಯಶೋದಾ ಪೂಜಾರ್ತಿ ಹಾಗೂ ದೀಪಕ್ ರಾವ್ ಅವರ ತಾಯಿ ಪ್ರೇಮ ರಾವ್ ಅವರು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದ್ದಾರೆ.
2019 ರ ಜನವರಿಯಲ್ಲಿ ನನ್ನ ಮಗ ದೀಪಕ್ ರಾವ್ ಹತ್ಯೆಯಾಗಿ 6 ವರ್ಷಗಳು ಕಳೆದಿವೆ. ತನಿಖೆ ತ್ವರಿತವಾಗಿ ನಡೆದು ಅಪರಾಧಿಗಳಿಗೆ ಶಿಕ್ಷೆಯಾಗುವುದು ಎಂಬ ನಿರೀಕ್ಷೆಯಲ್ಲಿದ್ದೆವು. ಆದರೆ ನ್ಯಾಯಾಲಯದಲ್ಲಿ ತನಿಖೆಯು ನಿರೀಕ್ಷೆಗಿಂತ ಹೆಚ್ಚು ಸಮಯ ತೆಗೆದುಕೊಳ್ಳುತ್ತಿವೆ ಎಂದು ದೀಪಕ್ ರಾವ್ ಅವರ ತಾಯಿ ಪ್ರೇಮಾ ರಾವ್ ತಿಳಿಸಿದ್ದಾರೆ.
2015ರಲ್ಲಿ ನನ್ನ ಮಗ ಪ್ರಶಾಂತ್ ಪೂಜಾರಿ ಹತ್ಯೆಯಾಗಿದ್ದು, ಇದೀಗ ಆತನ ತಾಯಿ ಯಶೋದಾ ಅವರು ವಿಶೇಷ ನ್ಯಾಯಾಲಯದಲ್ಲಿ ತ್ವರಿತ ತನಿಖೆ ನಡೆಸಿ ತಪ್ಪಿತಸ್ಥರಿಗೆ ಶಿಕ್ಷೆಯಾಗುವಂತೆ ಮನವಿ ಮಾಡಿದ್ದಾರೆ.
ಗೌರಿ ಲಂಕೇಶ್ ಮತ್ತು ಕಲಬುರ್ಗಿ ಹತ್ಯೆ ಪ್ರಕರಣವನ್ನು ವಿಶೇಷ ನ್ಯಾಯಾಲಯವನ್ನು ಸ್ಥಾಪಿಸಿ ಶೀಘ್ರಗತಿಯಲ್ಲಿ ಅಪರಾಧಿಗಳಿಗೆ ಶಿಕ್ಷೆಯಾಗುವಂತೆ ಮಾಡುವುದಾಗಿ ಭರವಸೆ ನೀಡಿದೆ. ಹಾಗೆಯೇ ದೀಪಕ್ ರಾವ್ ಮತ್ತು ಪ್ರಶಾಂತ್ ಪೂಜಾರಿ ಪ್ರಕರಣವನ್ನು ವಿಶೇಷ ನ್ಯಾಯಾಲಯದ ಮೂಲಕ ತನಿಖೆ ನಡೆಸಿ ಅಪರಾಧಿಗಳನ್ನು ಶೀಘ್ರವಾಗಿ ಶಿಕ್ಷೆಗೆ ಒಳಪಡಿಸಿ ನ್ಯಾಯ ಒದಗಿಸಿ ಕೊಡಬೇಕೆಂದು ಮನವಿಯಲ್ಲಿ ವಿನಂತಿಸಿದ್ದಾರೆ.