ಉಳ್ಳಾಲ, ಡಿ 30 (DaijiworldNews/MS): ಬಿಜೆಪಿ :16 ಕಾಂಗ್ರೆಸ್:7
ಸೊಮೇಶ್ವರ ಗ್ರಾಮ ಪಂಚಾಯತ್ ಪುರಸಭೆಯಾಗಿ ಮೇಲ್ದರ್ಜೆಗೇರಿದ ಬಳಿಕ ನಡೆದ ಪ್ರಥಮ ಚುನಾವಣೆಯಲ್ಲಿ ಬಿಜೆಪಿಯ16 ಅಭ್ಯರ್ಥಿಗಳು ಜಯಗಳಿಸುವ ಮೂಲಕ ಸ್ಪಷ್ಟ ಬಹುಮತದೊಂದಿಗೆ
ಚೊಚ್ಚಲ ಪುರಸಭೆಯ ಆಡಳಿತದ ಚುಕ್ಕಾಣಿಯನ್ನು ಹಿಡಿದಿದ್ದು, ಕಾಂಗ್ರೆಸ್ 07 ಅಭ್ಯರ್ಥಿಗಳು ಜಯಗಳಿಸಿದ್ದಾರೆ.
ಪುರಸಭೆಯ ಎಲ್ಲಾ 23 ಸ್ಥಾನಗಳಿಗೆ ಸ್ಪರ್ಧಿಸಿದ್ದ ಬಿಜೆಪಿಯ 16 ಅಭ್ಯರ್ಥಿಗಳು ಜಯಗಳಿಸಿದ್ದು, 22 ಸ್ಥಾನಗಳಲ್ಲಿ ಸ್ಪರ್ಧೆ ನಡೆಸಿದ್ದ ಕಾಂಗ್ರೆಸ್ 07 ಸ್ಥಾನವನ್ನು ಪಡೆದುಕೊಂಡಿದೆ. ಕಾಂಗ್ರೆಸ್ ಬೆಂಬಲದಿಂದ ಸ್ಪರ್ಧಿಸಿದ್ದ 3ನೇ ಪ್ರಕಾಶ್ ನಗರ ವಾರ್ಡ್ ನಲ್ಲಿ ಸಿಪಿಐಎಂ ಅಭ್ಯರ್ಥಿ ಬಿಜೆಪಿ ಅಭ್ಯರ್ಥಿಯ ಎದುರು ಸೋಲನ್ನನುಭವಿಸಿದ್ದಾರೆ.
ಸೋಮೇಶ್ವರ ಪುರಸಭೆಗೆ ಡಿ. 27ರಂದು ನಡೆದ ಚುನಾವಣೆಯಲ್ಲಿ ಒಟ್ಟು 23 ಸ್ಥಾನಗಳಿಗೆ 50 ಅಭ್ಯರ್ಥಿಗಳು ಸ್ಪರ್ಧೆಯಲ್ಲಿದ್ದರು. 18 ಕಡೆಗಳಲ್ಲಿ ಕಾಂಗ್ರೆಸ್ - ಬಿಜೆಪಿ ಅಭ್ಯರ್ಥಿಗಳ ನಡುವೆ ನೇರ ಸ್ಪರ್ಧೆಯಿದ್ದರೆ, ಒಂದು ವಾರ್ಡ್ನಲ್ಲಿ ಕಾಂಗ್ರೆಸ್ ಬೆಂಬಲಿತ ಸಿಪಿಐಎಂ ಅಭ್ಯರ್ಥಿ ನೇರ ಸ್ಪರ್ಧೆಯಲ್ಲಿದ್ದರು. ನಾಲ್ಕು ವಾರ್ಡ್ಗಳಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಅಭ್ಯರ್ಥಿಗಳಿಗೆ ಸಿಪಿಐಎಂ, ಆಮ್ ಆದ್ಮಿ ಪಾರ್ಟಿ, ನಲ್ಲಿ ಸೋಷಿಯಲ್ ವಲೇರ್ ಪಕ್ಷ ಮತ್ತು ಪಕ್ಷೇತರ ಅಭ್ಯರ್ಥಿ ಸ್ಪರ್ಧೆಯಲ್ಲಿದ್ದರು
ಟಾಸ್ ಕಾಂಗ್ರೆಸ್ ಗೆ ಜಯ: ಪುರಸಭೆಯ 13ನೇ ಕುಂಪಲ ವಾರ್ಡ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ದೀಪಕ್ ಪಿಲಾರ್ ಮತ್ತು ಬಿಜೆಪಿ ಅಭ್ಯರ್ಥಿ ರಾಜೇಶ್ ಕುಮಾರ್ ಕೆ.ಎಸ್. ಅವರು 247 ಮತಗಳನ್ನು ಪಡೆದು ಸಮಬಲ ಸಾಧಿಸಿದ್ದು ಮತ ಎಣಿಕೆ ಮುಗಿದ ಬಳಿಕ ನಡೆದ ಟಾಸ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ದೀಪಕ್ ಪಿಲಾರ್ ಗೆಲುವನ್ನು ಸಾಧಿಸಿದರು.