ಮಂಗಳೂರು, ಡಿ 30 (DaijiworldNews/SK): ಮಂಗಳೂರು ಮಡಂಗಾವ್ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿಗೆ ವೀಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನ ಮಂತ್ರಿ ನರೇಂದ್ರ ಮೋದಿ ಚಾಲನೆ ನೀಡಿದರು. ಮಂಗಳೂರಿನಲ್ಲಿ ದ.ಕ. ಸಂಸದ ನಳಿನ್ ಕುಮಾರ್ ಕಟೀಲ್ ರವರು ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿಗೆ ಚಾಲನೆ ನೀಡಿದ್ದಾರೆ.
ಮಂಗಳೂರು ಮಡಗಾಂವ್ ಸಂಚಾರದ ನಡುವೆ ಉಡುಪಿ ಮತ್ತು ಕಾರವಾರದಲ್ಲಿ ಎರಡು ನಿಲುಗಡೆಗಳು ಇರಲಿವೆ. ಬೆಳಗ್ಗೆ.8.30 ಕ್ಕೆ ಆರಂಭಿಸಿ ಮಧ್ಯಾಹ್ನ 1.15 ಕ್ಕೆ ಗೋವಾದ ಮಡಗಾಂವ್ ತಲುಪಲಿದೆ. ಬಳಿಕ ರೈಲು ಸಂಜೆ ಮಡಗಾಂವ್ ನಿಂದ 6.10ಕ್ಕೆ ಹೊರಟು ರಾತ್ರಿ 10.45ಕ್ಕೆ ಮಂಗಳೂರಿಗೆ ತಲುಪಲಿದೆ. ಈ ವಂದೇ ಭಾರತ್ ಎಕ್ಸ್ಪ್ರೆಸ್ ಒಂದು ದಿನದ ಗೋವಾ ಪ್ರಯಾಣಕ್ಕೆ ನೆರವಾಗಲಿದೆ ಎಂದು ತಿಳಿದು ಬಂದಿದೆ.
ಇನ್ನು ಎಂಟು ಬೋಗಿಗಳ ಹವಾನಿಯಂತ್ರಿತ ವ್ಯವಸ್ಥೆಯ ವಂದೇ ಭಾರತ್ ರೈಲಿನಲ್ಲಿ ಏರ್ ಲೈನ್ ಮಾದರಿ ಸೀಟುಗಳ ಜೊತೆಗೆ ಎಕ್ಸಿಕ್ಯುಟಿವ್ ಚೇರ್ ಗಳ ವ್ಯವಸ್ಥೆ, ಆನ್ ಬೋರ್ಡ್ ಸಸ್ಯಹಾರಿ ಮತ್ತು ಮಾಂಸಹಾರಿ ಊಟದ ವ್ಯವಸ್ಥೆ, ಆನ್ಬೋರ್ಡ್ ವೈ-ಫೈ ಮತ್ತು ರೀಡಿಂಗ್ ಲೈಟ್ ಗಳ ಸೌಲಭ್ಯ, ಸ್ವಯಂಚಾಲಿತ ಬಾಗಿಲುಗಳು, ಸ್ಮೋಕ್ ಅಲರ್ಟ್, ಸಿಸಿಟಿವಿ ಕ್ಯಾಮೆರಾಗಳು, ಸೆನ್ಸಾರ್ ಆಧಾರಿತ ವಾಶ್ ಬೇಸಿನ್ ಸೌಲಭ್ಯಗಳಿವೆ.
ಇನ್ನು ಮಂಗಳೂರಿನಲ್ಲಿ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿಗೆ ಚಾಲನೆ ನೀಡಿದ ಸಂದರ್ಭ ಶಾಸಕ ವೇದವ್ಯಾಸ ಕಾಮತ್, ಮ.ನಾ.ಪ ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಮತ್ತಿತ್ತರು ಉಪಸ್ಥಿತರಿದ್ದರು.